HomePage_Banner
HomePage_Banner
HomePage_Banner
HomePage_Banner

ಮಡಿಕೇರಿಯಲ್ಲಿ ಆಕ್ಟೀವಾ-ಕಾರು ಅಪಘಾತ -ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು

Puttur_Advt_NewsUnder_1
Puttur_Advt_NewsUnder_1

ಸಿಇಟಿ ಪರೀಕ್ಷೆ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಘಟನೆ

ಪುತ್ತೂರು:ಮಡಿಕೇರಿಯಲ್ಲಿ ನಡೆದ ಅಪಘಾತವೊಂದರಲ್ಲಿ ಇಲ್ಲಿನ ಅಂಬಿಕಾ ವಿದ್ಯಾಲಯದ ಗತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವರು ದಾರುಣ ಸಾವಿಗೀಡಾಗಿರುವ ಘಟನೆ ಜು.31ರಂದು ಸಂಜೆ ನಡೆದಿದೆ.
ಸಿಇಟಿ ಎರಡನೇ ದಿನದ ಪರೀಕ್ಷೆ ಮುಗಿಸಿ ಮನೆಗೆ ಹೋಗುತ್ತಿದ್ದ ಅಂಬಿಕಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರೇಯಸ್ (18ವ.)ಮೃತಪಟ್ಟವರು.ಅಪಘಾತದಿಂದ ಅವರ ಸ್ನೇಹಿತ ಸಿಬಿನ್ ತೀವ್ರ ಗಾಯಗೊಂಡಿದ್ದಾರೆ.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ, ಸೋಮವಾರಪೇಟೆ ನಂಜರಾಯಪಟ್ಟಣದ ಶ್ರೇಯಸ್ ಹಾಗೂ ಅವರ ಸ್ನೇಹಿತ ಸಿಬಿನ್ ಎಂಬವರು ತಮ್ಮ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದ ವೇಳೆ ಮಡಿಕೇರಿ ಸಂಪಿಗೆಕಟ್ಟೆ ಎಂಬಲ್ಲಿ ಇವರ ಸ್ಕೂಟರ್ ಮತ್ತು ಮಾರುತಿ ಆಲ್ಟೋ ೮೦೦ ಕಾರಿನ ಮಧ್ಯೆ ಅಪಘಾತ ಸಂಭವಿಸಿತ್ತು.ಶ್ರೇಯಸ್ ಅವರು ಮಡಿಕೇರಿಯಲ್ಲಿ ಸಿಇಟಿ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಘಠನೆ ನಡೆದಿದೆ. ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಶ್ರೇಯಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಗಂಭೀರ ಗಾಯಗೊಂಡ ಸ್ನೇಹಿತ ಸಿಬಿನ್‌ರವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮಡಿಕೇರಿ ಸಂಚಾರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.