ಮಾಜಿ ಸಚಿವ ರಮಾನಾಥ ರೈ, ಶಕುಂತಳಾ ಶೆಟ್ಟಿ ಸ್ವಯಂ ಕ್ವಾರಂಟೈನ್‌ಗೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ ಮತ್ತು ಪುತ್ತೂರಿನ ಮಾಜಿ ಶಾಸಕರಾದ ಶ್ರೀಮತಿ ಶಕುಂತಳಾ ಟಿ. ಶೆಟ್ಟಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ನಾನು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆಗಳಿದ್ದರೆ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಐವನ್ ಡಿ’ಸೋಜಾ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೆಮ್ಮು, ಜ್ವರ ಮುಂತಾದ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ರೈ ಮನವಿ ಮಾಡಿದ್ದಾರೆ. ಜೊತೆಗೆ ಐವನ್ ಡಿಸೋಜ ಹಾಗೂ ಕೋವಿಡ್ ಸೋಂಕಿತರೆಲ್ಲರೂ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ತಾನೂ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿರುವುದಾಗಿ ಶಕುಂತಳಾ ಶೆಟ್ಟಿ ಸುದ್ದಿಗೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.