ಆ.5ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶಿಲಾನ್ಯಾಸ | ಹನುಮಗಿರಿ ಶ್ರೀ ಕೋದಂಡರಾಮ ಸನ್ನಿಧಿಯಲ್ಲಿ ವಿಶೇಷ ಅಭಿಷೇಕ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಆ.5ರಂದು ಶಿಲಾನ್ಯಾಸ ನಡೆಯಲಿದೆ. ಮಧ್ಯಾಹ್ನ 12.30 ರಿಂದ12.40 ರ ಮುಹೂರ್ತದಲ್ಲಿ ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಇದೇ ಮುಹೂರ್ತದಲ್ಲಿ ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಶ್ರೀ ಕೋದಂಡರಾಮ ಸನ್ನಿಧಿಯಲ್ಲಿ ಶ್ರೀರಾಮ ದೇವರಿಗೆ ವಿಶೇಷ ಪೂಜೆ ಮತ್ತು ಅಭಿಷೇಕ ನಡೆಯಲಿದೆ.

 ಶ್ರೀ ಕೋದಂಡರಾಮ ದೇವರು ಹನುಮಗಿರಿ

ಭಕ್ತಾಧಿಗಳು ಈ ಪುಣ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನೆರವೇರಲಿ ಎಂದು ಪ್ರಾರ್ಥಿಸುವಂತೆ ಹನುಮಗಿರಿ ಶ್ರೀ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.