ನೀರಕಟ್ಟೆ: ಲಾರಿ ಪಲ್ಟಿ-ಚಾಲಕನಿಗೆ ಗಾಯ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಕಾಂಕ್ರಿಟ್ ಮಿಕ್ಸಿಂಗ್ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ಆ.೩ರಂದು ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಹಾಸನದಿಂದ ಮಂಗಳೂರಿಗೆ ತೆರೆಳುತ್ತಿದ್ದ ಕಾಂಕ್ರಿಟ್ ಮಿಕ್ಸಿಂಗ್ ಲಾರಿ ನೀರಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಘಟನೆಯಿಂದಾಗಿ ಲಾರಿ ಜಖಂಗೊಂಡಿದ್ದು ಚಾಲಕ ಅದರೊಳಗೆ ಸಿಲುಕಿಕೊಂಡಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ನಿವಾಸಿಗಳು ಲಾರಿಯೊಳಗಿದ್ದ ಚಾಲಕನನ್ನು ರಕ್ಷಿಸಿ ವಾಹನವೊಂದರಲ್ಲಿ ಆಸ್ಪತ್ರೆಗೆ ಕರೆದೊಯ್ಯಿದಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.