ಈ ಬಾರಿ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 74 ನೇ ಸ್ವಾತಂತ್ರ್ಯೋತ್ಸವದ ದಿನಗಣನೆ ಆರಂಭವಾಗಿದ್ದು, ಕೋವಿಡ್‌ನಿಂದಾಗಿ ಈ ಬಾರಿಯ ಆಚರಣೆಯಲ್ಲಿ ಸಾಂಸ್ಕೃತಿಕ ಕಾಯಕ್ರಮಗಳಿಗೆ ಅವಕಾಶವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಆ. 5ರಂದು ತಮ್ಮ ಕಚೇರಿಯ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆಗಳಿಗೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು. ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲು ಅವಕಾಶವಿಲ್ಲ ಎಂದು ಹೇಳಿದ ಅವರು ಜನರು ತಮ್ಮ ಮನೆಗಳಲ್ಲಿ ಉಳಿದು ಆ ಮೂಲಕ ತಮ್ಮ ದೇಶಪ್ರೇಮವನ್ನು ವ್ಯಕ್ತಪಡಿಸುವಂತೆ ವಿನಂತಿಸಿದರು. ನಾವು ಆನ್‌ಲೈನ್ ಮೂಲಕ ಜಿಲ್ಲಾ ಮಟ್ಟದ ಕಾರ್ಯವನ್ನು ಪ್ರಸಾರ ಮಾಡಲಿದ್ದೇವೆ. ನಗರದ ಪ್ರಮುಖ ವಲಯದಲ್ಲಿ ಸ್ಥಾಪಿಸಲಾದ ಡಿಜಿಟಲ್ ಪರದೆಯ ಮೂಲಕ ಕಾರ್ಯಕ್ರಮವನ್ನು ನೋಡಬಹುದಾಗಿದೆ ಎಂದು ಅವರು ಹೇಳಿದರು. ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವಾಗ ಜನರು ಎಚ್ಚರಿಕೆ ವಹಿಸಬೇಕು, ಕಾರ್ಯಕ್ರಮಕ್ಕಾಗಿ ಹೆಚ್ಚಿನ ಜನಸಂದಣಿಯನ್ನು ಒಟ್ಟುಗೂಡಿಸುವಂತಿಲ್ಲ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಮತ್ತು ಮಾಸ್ಕ್ ಧರಿಸುವಿಕೆ ಇವೆಲ್ಲವೂ ಕಡ್ಡಾಯವಾಗಿರಬೇಕು ಎಂದು ಅವರು ಸಲಹೆ ನೀಡಿದರು.

ಕೋವಿಡ್ ಸಾಂಕ್ರಾಮಿಕ ರೋಗ ಹರಡುವ ಈ ಸಂಕಷ್ಟಕರ ಸಮಯದಲ್ಲಿ, ನಾಗರಿಕ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ನೈರ್ಮಲ್ಯ ಕಾರ್ಮಿಕರು, ಪೊಲೀಸ್ ಸಿಬ್ಬಂದಿ ಮತ್ತು ಸಮಾಜದ ಸ್ವಾಸ್ಥ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರು ವೈದ್ಯರನ್ನು ಗುರುತಿಸಿ ಸನ್ಮಾನಿಸಲು ಜಿಲ್ಲಾಡಳಿತ ಯೋಜಿಸಿದೆ ಎಂದು ಅವರು ಹೇಳಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಎಂ. ಜೆ., ಪ್ರೊಬೆಷನರಿ ಐಎಎಸ್ ಅಧಿಕಾರಿ ಮೋನಾ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.