ಎಸ್‌ಎಸ್‌ಎಲ್‌ಸಿ ಫಲಿತಾಂಶ ದಿನ ಇನ್ನೂ ನಿಗದಿಯಾಗಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

Puttur_Advt_NewsUnder_1
Puttur_Advt_NewsUnder_1
  • ನಾಳೆ(ಆ.7) ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುದ್ದಿ ಸತ್ಯಕ್ಕೆ ದೂರ

ಪುತ್ತೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ದಿನಾಂಕ ಇನ್ನೂ ಅಂತಿಮವಾಗಿಲ್ಲ. ನಾಳೆ(ಆ.7) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸಚಿವರು, ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಈ ಬಗ್ಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಅವರು ಹೇಳಿದರು.

ಕೊರೋನಾ ವೈರಸ್ ವ್ಯಾಪಕವಾಗಿದ್ದ ಮಧ್ಯೆ ಸರಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. ವಿದ್ಯಾರ್ಥಿಗಳ ಧೈರ್ಯವಾಗಿ ಪರೀಕ್ಷೆ ಎದುರಿಸಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ದಿನಾಂಕವನ್ನು ಇನ್ನೂ ಅಂತಿಮಪಡಿಸಿಲ್ಲ ಎಂದು ಈ ಕುರಿತು ಸ್ವತಃ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.