ದಿನಸಿ, ತರಕಾರಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೊಳಪಡಿಸಲು ಕೇಂದ್ರ ಸರಕಾರದಿಂದ ರಾಜ್ಯಗಳಿಗೆ ಸೂಚನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಿನಸಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಕೊರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ನಿರ್ಧಾರ ತೆಗೆದುಕೊಂಡಿದ್ದು, ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸುವುದು ಸೂಕ್ತ ಎಂದೂ ಕೇಂದ್ರ ಸೂಚನೆ ನೀಡಿದೆ.

ದೇಶಾದ್ಯಂತ ದಿನಬಳಕೆ ವಸ್ತುಗಳ ವ್ಯಾಪಾರಿಗಳು, ದಿನಸಿ ಮತ್ತು ತರಕಾರಿ ವ್ಯಾಪಾರಿಗಳ ಮುಖಾಂತರ ಸೋಂಕು ಪ್ರಸರಣದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದು, ಇದೇ ಕಾರಣಕ್ಕೆ ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳ ಮೂಲಕ ಕೋವಿಡ್ ಸೋಂಕು ಹರಡುವ ಸಂಭವವಿರುವ ಕಾರಣ ಅವರಿಗೆಲ್ಲರಿಗೂ ಕೊರೋನಾ ಟೆಸ್ಟ್ ಮಾಡಿಸಲು ಸೂಚಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಕೊರೋನಾ ಸೋಂಕಿತರನ್ನು ಕರೆದೊಯ್ಯಲು ಅನುಕೂಲವಾಗುವಂತೆ ಸುಸಜ್ಜಿತ ಆಂಬುಲೆನ್ಸ್ ಸೌಲಭ್ಯ ನಿಗದಿಪಡಿಸಬೇಕು. ತುರ್ತು ಕರೆಗಳಿಗೆ ತಕ್ಷಣವೇ ಸ್ಪಂದಿಸುವಂತೆಯೂ ಅವರು ಸೂಚಿಸಿದ್ದು, ಕೊರೋನಾ ಈಗ ಹೊಸ ಪ್ರದೇಶಗಳಿಗೆ ಹರಡುತ್ತಿದೆ. ಹೀಗಾಗಿ ಆರಂಭದಲ್ಲಿಯೇ ಸೋಂಕಿತರನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುವ ಮೂಲಕ ಕೊರೋನಾ ಸೋಂಕಿನ ಪ್ರಕರಣ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ. ಜೀವ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕಿದೆ.ಸಾವಿನ ಸಂಖ್ಯೆಯನ್ನು ಕೂಡ ನಿಯಂತ್ರಣಕ್ಕೆ ತರಬೇಕಿದ್ದು, ಇದು ಶೇ.೧ಕ್ಕಿಂತ ಕಡಿಮೆ ಇರುವಂತೆ ನೋಡಿಕೊಳ್ಳಬೇಕಿದೆ ಎಂದು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ರಾಜೇಶ್ ಭೂಷಣ್ ನಿರ್ದೇಶನ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.