Breaking News

ಭಾರಿ ಮಳೆಯ ಮುನ್ಸೂಚನೆ: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ಜಿಲ್ಲೆಯಾದ್ಯಂತ ಆ.8ರಿಂದ ಆ.9ರ ತನಕ ರೆಡ್ ಅಲರ್ಟ್ ಹಾಗೂ ಆ.9 ರಿಂದ ಆ.11ರ ತನಕ ಆರೆಂಜ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿಯವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ನದಿ, ಸಮುದ್ರ ಇಳಿಯದಂತೆ ಎಚ್ಚರದಿಂದ ಇರುವುದು, ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ/ಮರಗಳ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳಿಗೆ ತಲುಪುವುದು, ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿರುವಂತೆ ಸೂಚಿಸಲಾಗಿದೆ. ಎಲ್ಲಾ ಗ್ರಾಮ ಪಂಚಾಯತ್‌ಗಳ ಅಭಿವೃದ್ದೀ ಅಧಿಕಾರಿಗಳು, ಗ್ರಾಮಕರಣಿಕರು ತಮ್ಮ ತಮ್ಮ ಗ್ರಾಮ, ಪಂಚಾಯತ್ ವ್ಯಾಪ್ತಿಯಲ್ಲಿ ಸನ್ನದ್ದರಿದ್ದು ಯಾವುದೇ ವಿಪತ್ತು ಸಂದರ್ಭದಲ್ಲಿ ತಕ್ಷಣ ಸ್ಪಂದಿಸುವುದು ಹಾಗೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಅದೇಶದಲ್ಲಿ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ತುರ್ತು ಸೇವೆಗೆ ಕರೆಮಾಡಿ: ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಉಂಟಾದಲ್ಲಿ ಸಾರ್ವಜನಿಕರು ತುರ್ತು ಸೇವೆ 24*7 ಕಂಟ್ರೋಲ್ ರೂಂ ಟೋಲ್ ಪ್ರೀ ನಂಬರ್ 1077 ಅಥವಾ 9483908000ಕ್ಕೆ ಕರೆ ಮಾಡುವಂತೆ ಅದೇಶದಲ್ಲಿ ಸೂಚಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.