ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಅಮ್ಮುಂಜ ಹೃದಯಾಘಾತಕ್ಕೆ ಬಲಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ, ಕುರಿಯ ಗ್ರಾಮದ ಅಮ್ಮುಂಜೆ ನಿವಾಸಿ ನಾರಾಯಣ ನಾಯ್ಕ (48ವ.) ಅವರು ಹೃದಯಾಘಾತಕ್ಕೀಡಾಗಿ ಆ.೮ರಂದು ರಾತ್ರಿ ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ವೇಳೆ ಕೊನೆಯುಸಿರೆಳೆದಿದ್ದಾರೆ.ಕಳೆದ ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡಿಕೊಂಡು ಚಿರಪರಿಚಿತರಾಗಿದ್ದ ನಾರಾಯಣ ಅವರು ಸರಳ, ಸಜ್ಜನಿಕೆಯೊಂದಿಗೆ ಎಲ್ಲರ ಜೊತ ಸ್ನೇಹಜೀವಿಯಾಗಿ ಗುರುತಿಸಿಕೊಂಡಿದ್ದರು.ಮರಾಠಿ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳಲ್ಲಿಯೂ ಅವರು ಗುರುತಿಸಿಕೊಂಡಿದ್ದರು.ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಪ್ರಚಾರ ಸಮಿತಿಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ ಪೂರ್ಣಿಮಾ, ಪುತ್ರ ಪ್ರಜ್ವಲ್ ಅವರನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.