ನಾಳೆ(ಆ. 10) ಪುತ್ತೂರು ಪತ್ರಕರ್ತರ ಸಂಘದಿಂದ ನಾರಾಯಣ ನಾಯ್ಕರಿಗೆ ಶ್ರದ್ಧಾಂಜಲಿ ಅರ್ಪಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಕಾರ್ಯದರ್ಶಿ, ಸಂಘದ ಹಾಲಿ ಕಾರ್ಯಕಾರಿಣಿ ಸದಸ್ಯರಾಗಿದ್ದ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ನಾರಾಯಣ ನಾಯ್ಕ ಅಮ್ಮುಂಜೆರವರಿಗೆ ಆ.10ರಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಯಲಿದೆ.

ಸಂಘದ ಸಕ್ರಿಯ ಸದಸ್ಯರೂ, ನಮ್ಮೆಲ್ಲರ ಆತ್ಮೀಯರೂ ಆಗಿದ್ದ ಪತ್ರಕರ್ತ ನಾರಾಯಣ ನಾಯ್ಕ್ ಅಮ್ಮುಂಜ ಅವರ ಅಕಾಲಿಕ ಅಗಲಿಕೆ ನಮಗೆಲ್ಲ ತೀವ್ರ ನೋವು ತಂದಿದೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಬೇಡುತ್ತಾ ನಾಳೆ (ಆ. 10) ಪೂರ್ವಾಹ್ನ 11 ಘಂಟೆಗೆ ಪ್ರೆಸ್ ಕ್ಲಬ್ ನಲ್ಲಿ ಸಂಘದ ವತಿಯಿಂದ ಅಗಲಿದ ಮಿತ್ರನಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಎಲ್ಲಾ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಿ ಅಗಲಿದ ದಿವ್ಯಾತ್ಮಕ್ಕೆ ಚಿರಶಾಂತಿ ಕೊರಬೇಕೆಂದು ವಿನಂತಿಸುತ್ತಿದ್ದೇವೆ ಎಂದು ಕಾರ್ಯದರ್ಶಿ ನಾಗರಾಜ್ ಎನ್.ಕೆ. ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.