ಎಸ್‌ ಎಸ್‌ ಎಲ್‌ ಸಿ ಫಲಿತಾಂಶ: ಪುತ್ತೂರು, ಕಡಬ ಉಭಯ ತಾಲೂಕಿನ ಫ್ರೌಢ ಶಾಲೆಗಳ ಶೇಕಡವಾರು ಫಲಿತಾಂಶ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ 19 ಮಧ್ಯೆ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಪೂರ್ಣಗೊಂಡಿದ್ದು, ಫಲಿತಾಂಶವೂ ಪ್ರಕಟವಾಗಿದೆ. ಪುತ್ತೂರು, ಕಡಬ ತಾಲೂಕಿನ ಪ್ರಮುಖ ಖಾಸಗಿ ಪ್ರೌಢಶಾಲೆಗಳು ಪಡೆದಿರುವ ಫಲಿತಾಂಶದ ಸಂಕ್ಷಿಪ್ತ ವಿವರ ಇಲ್ಲಿ ನೀಡಿದ್ದೇವೆ.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಶೇ.85  ಫಲಿತಾಂಶ
2019-20 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯ 22 ವಿದ್ಯಾರ್ಥಿಗಳು  ವಿಶಿಷ್ಠ ಶ್ರೇಣಿಯಲ್ಲಿ , 81 ವಿದ್ಯಾರ್ಥಿಗಳು ಪ್ರಥಮಶ್ರೇಣಿಯಲ್ಲಿ, 32 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಶಾಲೆಗೆ ಶೇ. 85 ಫಲಿತಾಂಶ ಬಂದಿದೆ ಎಂದು ಶಾಲಾ ಮುಖ್ಯಗುರು ತಿಳಿಸಿದ್ದಾರೆ.

ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯಕ್ಕೆ ಶೇ.100 ಫಲಿತಾಂಶ
2019-20ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಪ್ರಕಾರ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯ ಶೇಕಡಾ ನೂರು ಫಲಿತಾಂಶ ದಾಖಲಿಸಿಕೊಂಡಿದೆ ಎಂದು ವಿದ್ಯಾಲಯದ ಪ್ರಾಂಶುಪಾಲರಾದ ಜೋಸ್ ಎಂ.ಜೆ.  ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 90 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 34 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ನೆಲ್ಯಾಡಿ ಸಂತಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ
2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೆಲ್ಯಾಡಿ ಸಂತಜಾರ್ಜ್ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ ಬಂದಿದೆ. ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 38 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 10 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ತಿಳಿಸಿದ್ದಾರೆ.

ಒಡಿಯೂರು ಶ್ರೀಗುರುದೇವ ಆಂಗ್ಲ ಮಾಧ್ಯಮ ಶಾಲೆಗೆ 100% – ಕನ್ನಡ ಮಾಧ್ಯಮ ಶಾಲೆಗೆ 80%  ಫಲಿತಾಂಶ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಡಿಯೂರು ಶ್ರೀಗುರುದೇವ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ ಹಾಗೂ ಒಡಿಯೂರು ಶ್ರೀ ಗುರುದೇವ ಕನ್ನಡ ಮಾಧ್ಯಮ ಶಾಲೆಗೆ 80% ಫಲಿತಾಂಶ ಲಭಿಸಿರುತ್ತದೆ. 4 ವಿದ್ಯಾರ್ಥಿಗಳು ಎ+ ಗ್ರೇಡ್ ಹಾಗೂ 7 ವಿದ್ಯಾರ್ಥಿಗಳು ಬಿ ಗ್ರೇಡ್‌ಗಳನ್ನು ಪಡೆದಿರುತ್ತಾರೆ.

ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಗೆ ಶೇ. 98 ಫಲಿತಾಂಶ
2019-20ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಗೆ 98% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 54 ವಿದ್ಯಾರ್ಥಿಗಳ ಪೈಕಿ 7 ಮಂದಿ 600ಕ್ಕೂ ಅಧಿಕ ಅಂಕವನ್ನು ಪಡೆದಿರುತ್ತಾರೆ. ಉಳಿದಂತೆ 16 ವಿದ್ಯಾರ್ಥಿಗಳು 90%, 19 ವಿದ್ಯಾರ್ಥಿಗಳು 80% ಅಂಕಗಳನ್ನು ಪಡೆದುಕೊಂಡರೆ, 18 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಬುಶ್ರಾ ಆಂಗ್ಲ ಮಾಧ್ಯಮ ಶಾಲೆಗೆ  ಶೇ.97.67 ಫಲಿತಾಂಶ
ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲೆಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇ.97.67 ಫಲಿತಾಂಶ ಬಂದಿದ್ದು, ಒಟ್ಟು 8 ವಿದ್ಯಾರ್ಥಿಗಳು‌ ಡಿಸ್ಟಿಂಕ್ಷನ್ ,26 ವಿದ್ಯಾರ್ಥಿಗಳು ಪ್ರಥಮ ದರ್ಜೆ ,8. ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಅಬ್ದುಲ್ ಅಝೀಜ್ ಬುಶ್ರಾರವರು ತಿಳಿಸಿದ್ದಾರೆ.

ಹನುಮಗಿರಿ ಈಶ್ವರಮಂಗಲ ಗಜಾನನ ಇಂಗ್ಲೀಷ್‌ ಮೀಡಿಯಾಂ ಸ್ಕೂಲ್‌ಗೆ ಶೇ.97.5
ಈಶ್ವರಮಂಗಲ ಗಜಾನನ ಇಂಗ್ಲೀಷ್‌ ಮೀಡಿಯಾಂ ಸ್ಕೂಲ್‌ಗೆ ಡಿಸ್ಟಿಂಷನ್‌ನಲ್ಲಿ 17 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 21 ಮಂದಿ, ಎರಡನೇ ದರ್ಜೆಯಲ್ಲಿ 01 ಮಂದಿ ಉತ್ತೀರ್ಣರಾಗುವೊಂದರೊಂದಿಗೆ ಒಟ್ಟು ಶೇ. 97.5 ಫಲಿತಾಂಶವನ್ನು ಪಡೆದಿದೆ.

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದಲ್ಲಿ ಶೇ. 96.5 -ಕನ್ನಡ ಮಾಧ್ಯಮ ವಿಭಾಗದಲ್ಲಿ 95 ಫಲಿತಾಂಶ
2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯು 96.5 ಶೇಕಡಾ ಫಲಿತಾಂಶವನ್ನು ಗಳಿಸಿಕೊಂಡಿದೆ. ಜೊತೆಗೆ ಕನ್ನಡ ಮಾಧ್ಯಮ ವಿಭಾಗದಲ್ಲಿ 95 ಶೇಕಡಾ ಫಲಿತಾಂಶ ಗಳಿಸಿಕೊಂಡಿದೆ. ಆಂಗ್ಲ ಮಾಧ್ಯಮ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 57 ವಿದ್ಯಾರ್ಥಿಗಳಲ್ಲಿ, 55 ವಿದ್ಯಾರ್ಥಿಗಳು  ತೇರ್ಗಡೆ ಹೊಂದಿ ಶೇಕಡಾ 96.5 ಫಲಿತಾಂಶ ಸಾಧನೆಗೆ ಕಾರಣಕರ್ತರಾಗಿರುತ್ತಾರೆ. 

ನೆಲ್ಯಾಡಿ ಸಂತಜಾರ್ಜ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ. 97.01 ಫಲಿತಾಂಶ
2019-20ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೆಲ್ಯಾಡಿ ಸಂತಜಾರ್ಜ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.97.01 ತೇರ್ಗಡೆ ಫಲಿತಾಂಶ ಬಂದಿದೆ.
ಒಟ್ಟು 81 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 64 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.97.01 ಫಲಿತಾಂಶ ಬಂದಿದೆ. ಮೂವರು ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 47 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 18 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. 

ರಾಮಕುಂಜ ಕ.ಮಾ.ಪ್ರೌಢಶಾಲೆಗೆ ಶೇ 96.09 ಫಲಿತಾಂಶ
ರಾಮಕುಂಜ 2019-20ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಗೆ 96.09 ಶೇ.ತೇರ್ಗಡೆ ಫಲಿತಾಂಶ ಲಭಿಸಿದೆ. ಸಂಸ್ಥೆಯಲ್ಲಿ ಪರೀಕ್ಷೆಗೆ ಹಾಜರಾದ 128 ವಿದ್ಯಾರ್ಥಿಗಳ ಪೈಕಿ 123 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.96.09 ಫಲಿತಾಂಶ ಬಂದಿದೆ. 15 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 74 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 31 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಮೂವರು ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಗೆ ಶೇ. 96.61  ಫಲಿತಾಂಶ
2020೦ರ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಆಂಗ್ಲ ಮಾಧ್ಯಮದಲ್ಲಿ ಹಾಜರಾದ 59 ವಿದ್ಯಾರ್ಥಿಗಳಲ್ಲಿ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 96.61  ಫಲಿತಾಂಶ ದಾಖಲಾಗಿದೆ. ಎ+ 10, ಎ 21, ಬಿ+ ೯, ಬಿ 13 ಹಾಗೂ 4 ವಿದ್ಯಾರ್ಥಿಗಳು ಸಿ+ ಶ್ರೇಣಿಯೊಂದಿಗೆ ಉತ್ತೀರ್ಣರಾಗಿರುತ್ತಾರೆ ಎಂದು ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮತ್ತು ಮುಖ್ಯ ಶಿಕ್ಷಕಿ ರೂಪಕಲಾ ಕೆ ಯವರು  ತಿಳಿಸಿರುತ್ತಾರೆ.

ಸವಣೂರು ವಿದ್ಯಾರಶ್ಮಿಗೆ  ಶೇ. 91.43% ಫಲಿತಾಂಶ
ಒಟ್ಟು 35 ವಿದ್ಯಾರ್ಥಿಗಳು ಹಾಜರಾಗಿದ್ದು  32 ಮಂದಿ ತೇರ್ಗಡೆಯಾಗಿ 91.43 ಶೇಕಡಾ ಫಲಿತಾಂಶ ದಾಖಲಾಗಿದೆ. 7 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 19 ಮಂದಿ ಪ್ರಥಮ ದರ್ಜೆಯಲ್ಲಿ ಮತ್ತು 7 ಮಂದಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲಾ ಸಂಚಾಲಕ ರೊ. ಕೆ. ಸೀತಾರಾಮ ರೈ ಸವಣೂರು ಮತ್ತು ಆಡಳಿತಾಧಿಕಾರಿ ರೊ. ಅಶ್ವಿನ್ ಎಲ್. ಶೆಟ್ಟಿ, ಪ್ರಾಶುಂಪಾಲ ಸೀತಾರಾಮ ಕೇವಳ ಅವರು ತಿಳಿಸಿದ್ದಾರೆ.

ಸೈಂಟ್‌ ಜೋಕಿಮ್ಸ್‌ ಪ್ರೌಢ ಶಾಲೆಗೆ ಶೇ.88.88 ಫಲಿತಾಂಶ
ಕಡಬದ ಸೈಂಟ್‌ ಜೋಕಿಮ್ಸ್‌ ಪ್ರೌಢ ಶಾಲೆಯಲ್ಲಿ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಒಟ್ಟು 63 ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 56 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಒಟ್ಟು ಶೇ.88.88 ಫಲಿತಾಂಶವನ್ನು ಪಡೆದಿದೆ.

ಸುಳ್ಯಪದವು ಸರ್ವೋದಯ ಪ್ರೌಢ ಶಾಲೆಗೆ ಶೇ.83.94 ಫಲಿತಾಂಶ
ಒಟ್ಟು 56 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 47 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  ವಿಶಿಷ್ಠ ಶ್ರೇಣಿಯಲ್ಲಿ 7 ವಿದ್ಯಾರ್ಥಿಗಳು ಹಾಗೂ ಪ್ರಥಮ ಶ್ರೇಣಿಯಲ್ಲಿ 37 ವಿದ್ಯಾರ್ಥಿಗಳು ಮತ್ತು ದ್ವಿತೀಯ ಶ್ರೇಣಿಯಲ್ಲಿ 3 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.

ಕಾಣಿಯೂರು ಸರಕಾರಿ ಪ್ರೌಢ ಶಾಲೆಗೆ ಶೇ 53.67 ಫಲಿತಾಂಶ
ಕಾಣಿಯೂರು ಪ್ರೌಢ ಶಾಲಾ ವಿಭಾಗ ಶೇ 53.67 ಫಲಿತಾಂಶವನ್ನು ಗಳಿಸಿಕೊಂಡಿದೆ. ಒಟ್ಟು 85 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 48 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.