ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಶೇ.71.80 ತೇರ್ಗಡೆ| ದ.ಕ ಜಿಲ್ಲೆಗೆ 12 ನೇ ಸ್ಥಾನ

  • ಈ ಬಾರಿಯೂ ಬಾಲಕಿಯರೇ ಮೇಲುಗೈ

ಪುತ್ತೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಗೊಂಡಿದೆ.ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಫಲಿತಾಂಶ ಪ್ರಕಟಿಸಿದರು. ಒಟ್ಟು ಎಂಟು ಲಕ್ಷದ ಹನ್ನೊಂದು ಸಾವಿರದ ಐವತ್ತು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟಾರೆ ಶೇಕಡ 71.80 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ಎರಡು ಲಕ್ಷದ ಇಪ್ಪತ್ತೆಂಟು ಸಾವಿರದ ಏಳ್ನೂರ ಮೂವತ್ತನಾಲ್ಕು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ.

ಒಟ್ಟು 625ರಲ್ಲಿ 625 ಅಂಕಗಳನ್ನು ಆರು ವಿದ್ಯಾರ್ಥಿಗಳು ಪಡೆದಿದ್ದಾರೆ. ಕೋವಿಡ್-19 ಸೋಂಕು ಭೀತಿ ಇದ್ದರೂ ಈ ಬಾರಿ 8,11,050 ಮಂದಿ ಈ ಬಾರಿ ಪರೀಕ್ಷೆ ಬರೆದಿದ್ದರು. ಈ ಬಾರಿಯ ಪರೀಕ್ಷೆಯಲ್ಲಿ 66.41 ಶೇ ಬಾಲಕರು ಉತ್ತೀರ್ಣರಾಗಿದ್ದರೆ, ಶೇ. 77.74 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಆರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. 11 ಮಂದಿ ವಿದ್ಯಾರ್ಥಿಗಳು 624 ಅಂಕ ಪಡೆದಿದ್ದಾರೆ. 43 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೊದಲ ಸ್ಥಾನ ಬಂದಿದೆ. ಬೆಂಗಳೂರು ಗ್ರಾಮಾಂತರ ಸ್ವೀತಿಯ ಸ್ಥಾನ ಪಡೆದಿದೆ.ಮಧುಗಿರಿ ಮೂರನೇ ಸ್ಥಾನದಲ್ಲಿದ್ದು,ಯಾದಗಿರಿ ಕೊನೆ ಸ್ಥಾನದಲ್ಲಿದೆ. ಶಿಕ್ಷಣ ಇಲಾಖೆಯ ಎರಡು ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಎಸ್ ಎಂಎಸ್ ಮೂಲಕವೂ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯಬಹುದಾಗಿದೆ.ನಾಳೆ ಶಾಲೆಗಳಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟ. ಪ್ರಾವಿಷನ್ ಮಾರ್ಕ್ಸ್ ಕಾರ್ಡ್ ನಾಳೆ ಸಿಗಲಿದೆ. ಕೊರೊನಾ ಆತಂಕದ ಮಧ್ಯೆ ಜೂನ್ 24ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆದಿತ್ತು.

ಅದ್ಭುತ ಪ್ರತಿಭೆಗಳು:

625 ಅಂಕಗಳೊಂದಿಗೆ ಶಿರಸಿ ಸರ್ಕಾರಿ ಮಾರಿಕಾಂಬ ಪಿಯು ಕಾಲೇಜಿನ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರೆ, ಚಿರಾಯು. ಕೆ ಎರಡನೇ ಸ್ಥಾನ ಗಳಿಸಿದ್ದಾರೆ. ಒಟ್ಟು ರಾಜ್ಯದಲ್ಲಿ 6 ಜನ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದರೆ,12 ಮಂದಿ 625ಕ್ಕೆ 624 ಅಂಕಗಳನ್ನು ಗಳಿಸಿದ್ದಾರೆ. ಇನ್ನು ವಿದ್ಯಾರ್ಥಿಗಳು 66.41 ಶೇಕಡಾ ಫಲಿತಾಂಶ ಪಡೆದ್ರೆ ಹುಡುಗಿಯರು ಶೇಕಡಾ 77.74 ಫಲಿತಾಂಶ ಪಡೆಯುವ ಮೂಲಕ ಎಂದಿನಂತೆ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.