ಜೋಳದ ಲೋಡ್‌ನಲ್ಲಿ ಭಾರೀ ಪ್ರಮಾಣದ ಗಾಂಜಾ ಸಾಗಾಟ | 1.5 ಕ್ವಿಂಟಾಲ್‌ಗಿಂತಲೂ ಅಧಿಕ ಪ್ರಮಾಣದ ಗಾಂಜಾ ಪತ್ತೆ-ಮೂವರು ವಶಕ್ಕೆ | ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಭರ್ಜರಿ ಬೇಟೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪಿಕಪ್ ಜೀಪಿನಲ್ಲಿ ಜೋಳದ ಲೋಡ್‌ನಲ್ಲಿ ಸುಮಾರು 1.5 ಕ್ವಿಂಟಾಲ್‌ನಷ್ಟು ಭಾರೀ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದಾರೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಟ್ರಕೋಡಿ ಸಮೀಪ ಈ ಕಾರ್ಯಾಚರಣೆ ನಡೆದಿದ್ದು,ಇಷ್ಟೊಂದು ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆಯಾಗಿರುವುದು ಪುತ್ತೂರಿನಲ್ಲಿ ಇದೇ ಮೊದಲು.ಪ್ರಕರಣದಲ್ಲಿ ಜೀಪು ಚಾಲಕ, ಕಾರು ಚಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.