ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ವರ್ಗಾವಣೆ, ಮುಂಬಡ್ತಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಭಡ್ತಿ ಹೊಂದಿದ್ದಾರೆ. 1 ವರ್ಷದಿಂದ ಹೆಡ್ ಕಾನ್ಸ್‌ಸ್ಟೇಬಲ್ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ಳಾರೆ ನಿವಾಸಿ ಹೊನ್ನಪ್ಪ ಗೌಡರವರು ಎಎಸ್‌ಐ ಆಗಿ ಭಡ್ತಿ ಹೊಂದಿ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. 1 ವರ್ಷದಿಂದ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರು ಕಡೂರು ನಿವಾಸಿ ಆನಂದ ನಾಯ್ಕರವರು ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಭಡ್ತಿ ಹೊಂದಿ ಸುಳ್ಯ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಕಳೆದ 6 ವರ್ಷಗಳಿಂದ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಏನೆಕಲ್ಲು ನಿವಾಸಿ ವಿನಯ ಕುಮಾರ್‌ರವರು ಹೆಡ್‌ಕಾನ್ಸ್‌ಸ್ಟೇಬಲ್ ಆಗಿ ಭಡ್ತಿ ಹೊಂದಿ ಪುತ್ತೂರು ನಗರ ಸಂಚಾರಿ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

ಹೊನ್ನಪ್ಪ ಗೌಡ
ಆನಂದ ನಾಯ್ಕ
ವಿನಯ ಕುಮಾರ್

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.