ತಾಲೂಕಿನಲ್ಲಿ ಕೊರೋನಾಗೆ ಇನ್ನೊಂದು ಬಲಿ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ನಿಧನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 80 ವರ್ಷ ಪ್ರಾಯದ ವೃದ್ಧರೊಬ್ಬರು ಆ.11ರಂದ ಮೃತಪಟ್ಟಿದ್ದು, ಅವರ ಕೋವಿಡ್ -19ವರದಿಯಲ್ಲಿ ಕೊರೋನಾ ದೃಢಗೊಂಡಿದೆ. ಹಾಗಾಗಿ ತಾಲೂಕಿನಲ್ಲಿ ಕೊರೋನಾಗೆ ಇನ್ನೊಂದು ಬಲಿಯಾಗಿದೆ.

ಆನಾರೋಗ್ಯದಿಂದ ಬಳಲುತ್ತಿದ್ದ ಕಬಕ ಗ್ರಾಮದ ಶೇವಿರೆಯ ಸುಮಾರು 80 ವರ್ಷ ಪ್ರಾಯದ ವೃದ್ಧರೊಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಅವರ ಕೋವಿಡ್-19 ಪರೀಕ್ಷೆಯಲ್ಲಿ ಅವರಿಗೆ ಕೊರೋನಾ ನೆಗೆಟಿವ್ ಬಂದಿದ್ದು, ಎರಡನೇ ಬಾರಿಯ ಪರೀಕ್ಷೆಯಲ್ಲಿ ಅವರಿಗೆ ಕೊರೋನಾ ದೃಢಗೊಂಡ ವರದಿ ಬಂದಿದೆ. ವರದಿ ಬಂದ ಸಂದರ್ಭ ಅವರು ಮೃತಪಟ್ಟಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.