Breaking News

ಕೋವಿಡ್ ಮುಕ್ತ ನಗರಸಭೆ ನಿರ್ಮಾಣದ ಪೂರ್ವಭಾವಿ ಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ ಮುಕ್ತ ಪುತ್ತೂರು ನಿರ್ಮಾಣವೇ ನಮ್ಮ ಉದ್ದೇಶವಾಗಿದೆ. ಸಮುದಾಯದ ರಕ್ಷಣೆಗಾಗಿ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ಮಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೈಗೊಳ್ಳುವ ಕ್ಯಾಂಪ್‌ಗಳನ್ನು ಪರಿಣಾಮಕಾರಿಯಾಗಿ ಮಾಡಬೇಕಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ನಗರಸಭೆ ವ್ಯಾಪ್ತಿಯಲ್ಲಿ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ಮಾಡುವ ಕುರಿತು ನಗರಸಭೆಯ ಸಭಾಭವನದಲ್ಲಿ ಆ.೧೧ರಂದು ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್-೧೯ ಸಮುದಾಯ ಹರಡದಂತೆ ನಡೆಸುವ ಕಾಳಜಿಯನ್ನು ಎಲ್ಲರೂ ವಹಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು, ಅಧಿಕಾರಿಗಳು, ಉದ್ಯಮಿಗಳು, ವರ್ತಕರ ಸಹಕಾರ ಅಗತ್ಯ ಎಂದರು.

ಮುಳಿಯ ಜ್ಯುವೆಲ್ಸ್ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಮಾತನಾಡಿ, ಚಿಕಿತ್ಸೆಯ ಕುರಿತು ವ್ಯವಸ್ಥೆಗಳು ಸರಿಯಿಲ್ಲ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ನಗರಸಭೆ ಸದಸ್ಯ ಭಾಮಿ ಅಶೋಕ ಶೆಣೈ ಮಾತನಾಡಿ, ಮುಖ್ಯವಾಗಿ ಪಾಸಿಟಿವ್ ಕಂಡು ಬಂದಲ್ಲಿ ಅವರಿಗೆ ಮೆಡಿಸಿನ್ ತಕ್ಷಣ ನೀಡುವ ಕುರಿತು ಕ್ರಮ ಕೈಗೊಳ್ಳಬೇಕು ಎಂದರು.

ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ಕುರಿತು ಮಾಹಿತಿ ನೀಡಿದರು. ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ, ತಹಶೀಲ್ದಾರ್ ರಮೇಶ್ ಬಾಬು ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.