ಮೊರಾರ್ಜಿ ದೇಸಾಯಿ/ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಲ್ನಾಡು ಮತ್ತು ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಉಪ್ಪಿನಂಗಡಿ ಶಾಲೆಗಳ ೬ನೇತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.  ೨೦೧೯-೨೦ರ ಶೈಕ್ಷಣಿಕ ಸಾಲಿನಲ್ಲಿ ೫ನೇ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸ ಬಹುದು. ೬ರಿಂದ ೧೦ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ನೀಡಲಾಗುವುದು. ಅಭ್ಯರ್ಥಿಯು ತನ್ನ ಎಸ್‌ಎಟಿಎಸ್ ಸಂಖ್ಯೆ, ಭಾವಚಿತ್ರ, ಜಾತಿ ಹಾಗೂ ಆದಾಯ ಪ್ರಮಾಣಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸುವುದು. ಅರ್ಜಿ ಸಲ್ಲಿಸಲು ದಿನಾಂಕ: ೧೧-೦೮-೨೦೨೦ ರಿಂದ ೨೫-೦೮-೨೦೨೦ ವರೆಗೆ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು (ದೂರವಾಣಿಸಂಖ್ಯೆ:  9731579469, 9945170450 ) ಸಂಪರ್ಕಿಸಿಬಹುದು ಎಂದು ಪ್ರಕಟಣೆ ತಿಳಿಸಿದೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.