ವಿ.ಹಿಂ.ಪ.ದಿಂದ ಕೃಷ್ಣ ಜನ್ಮಾಷ್ಟಮಿ ಸರಳ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡದ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗು ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ಸರಳವಾಗಿ ಆಚರಿಸಲಾಯಿತು. ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ ಎಸ್ ಅವರು ಮಾತನಾಡಿ ೧೯೬೪ ಶ್ರೀಕೃಷ್ಣ ಜನ್ಮಾಷ್ಠಾಮಿಯಂದು ಮುಂಬಯಿಯ ಸಾಂದೀಪನಿ ಆಶ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ದ್ವಿತೀಯ ಸರಸಂಘಚಾಲಕ ಪರಮಪೂಜ್ಯನೀಯ ಗುರೂಜಿ ಹಾಗು ಹಲವಾರು ಸಾಧು ಸಂತರ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನೆ ಆಯಿತು. ಅಂದಿನಿಂದ ಇಂದಿನ ಹಲವಾರು ಹಿಂದೂ ಪರ ಹೋರಾಟ ಹಾಗು ಹಿಂದೂ ಸಮಾಜದಲ್ಲಿ ಪರಿವರ್ತನೆಯನ್ನು ಮಾಡಿದ ಕೀರ್ತಿ ವಿಶ್ವ ಹಿಂದೂ ಪರಿಷತ್ತಿಗೆ ಸಲ್ಲುತ್ತದೆ ಎಂದರು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷ ಜನಾರ್ಧನ ಬೆಟ್ಟ, ಬಜರಂಗದಳ ಜಿಲ್ಲಾ ಸಂಯೋಜಕ ಶ್ರೀಧರ ತೆಂಕಿಲ, ಜಿಲ್ಲಾ ಸಾಪ್ತಾಹಿಕ ಮಿಲನ್ ಪ್ರಮುಖ್ ಜಿತೇಶ್ ಬಲ್ನಾಡು, ಪುತ್ತೂರು ಪ್ರಖಂಡ ಸಂಯೋಜಕ ಹರೀಶ್ ಕುಮಾರ್ ದೊಳ್ಪಾಡಿ, ಪ್ರಖಂಡ ಸತ್ಸಂಗ ಪ್ರಮುಖ್ ರವಿಕುಮಾರ್ ಕೈತಡ್ಕ, ಬಜರಂಗದಳ ಸಹ ಸಂಯೋಜಕ ಪ್ರವೀಣ್ ಕಲ್ಲೇಗ, ಸಾಪ್ತಾಹಿಕ ಮಿಲನ್ ಪ್ರಮುಖ್ ರೂಪೇಶ್ ಬಲ್ನಾಡು, ನಗರ ಕಾರ್ಯದರ್ಶಿ ರೂಪೇಶ್ ಮುರ, ಪ್ರಜ್ವಲ್ ಸಂಪ್ಯ, ಕೇಸವ ಪ್ರಸಾದ್, ಜೀವನ್ ಆಚಾರ್ಯ, ಹರ್ಷಿತ್ ಬಲ್ನಾಡು ಮುಂತಾದವರು ಉಪಸ್ಥಿತರಿದ್ದರು. ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು ಸ್ವಾಗತಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.