ಪಾಣಾಜೆ: ಕೊವಿಡ್-19 ಬಗ್ಗೆ ಮಾಹಿತಿ ಶಿಬಿರ- ಉಚಿತ ಹೋಮಿಯೋಪತಿ ಔಷಧ ವಿತರಣೆ

Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ: ಮಾಹಾಮಾರಿ ಕೊರೋನಾ ವೈರಸ್ ಬಗ್ಗೆ ಮಾಹಿತಿ ಶಿಬಿರ ಹಾಗೂ ಉಚಿತ ಹೋಮಿಯೋಪತಿ ಔಷಧ ವಿತರಣಾ ಕಾರ್ಯಕ್ರಮ ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಆ.9 ರಂದು ಸಂಘದ ಆವರಣದಲ್ಲಿ ನಡೆಯಿತು.
ಪುತ್ತೂರು ಮಂಗಳಾ ಹೋಮಿಯೋಪತಿ ಕ್ಲಿನಿಕ್ ವೈದ್ಯರಾದ ಡಾ.ರಮೇಶ್ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಕೊವಿಡ್-19 ತಡೆಗಟ್ಟುವ ಬಗ್ಗೆ  ಮತ್ತು ಆರೋಗ್ಯ ವೃದ್ದಿಸಲು  ಹೋಮಿಯೋಪತಿ ಔಷಧ ತೆಗೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.ಮುಖ್ಯ ಅತಿಥಿ ತಾಲೂಕು ಪಂಚಾಯತ್ ಸದಸ್ಯೆ ಮೀನಾಕ್ಷಿ ಮಂಜುನಾಥ ಮಾತನಾಡಿ ಈ ಸಂಘ ಇತರ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಮಾದರಿಯಾಗಿದ್ದು ಉಚಿತ ಔಷಧ ವಿತರಣೆ ಬಗ್ಗೆ ಶ್ಲಾಘಿಸಿದರು. ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರುಗಳಾದ ಡಾ.ರಾಮಕೃಷ್ಣ ಭಟ್ ಹಾಗೂ ಡಾ.ಸತೀಶ್ ರಾವ್ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ದ.ಕ ಹಾಲು ಒಕ್ಕೂಟದ ನಿರ್ದೇಶಕ ಎಸ್.ಬಿ.ಜಯರಾಮ ರೈ ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷ ಹಾಗೂ ದ.ಕ.ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ಬಂಧುಗಳ ಆರೋಗ್ಯ ರಕ್ಷಣೆ ನಮ್ಮ ಹೊಣೆಯಾಗಿದ್ದು ಇದರ ಪ್ರಯೋಜನ ಪಡೆದು ಕೊಳ್ಳುವಂತೆ ತಿಳಿಸಿದರು. ಸಂಘದ ಉಪಾಧ್ಯಕ್ಷ ನ್ಯಾಯವಾದಿ ಕೃಪಾ ಶಂಕರ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಕಾರ್ಯಕ್ರಮ ನಿರೂಪಿಸಿದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು, ಸದಸ್ಯರು ಪಾಲ್ಗೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.