ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕೋವಿಡ್-19ಗೆ ಚಿಕಿತ್ಸೆ ಲಭ್ಯ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಯೋಜನೆಯಾಗಿದ್ದು ಈ ಯೋಜನೆಯಲ್ಲಿ ಕೋವಿಡ್-೧೯ ಚಿಕಿತ್ಸೆಯನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ೨೪೦ ಸಾಮಾನ್ಯ ಸೇವಾ ಕೇಂದ್ರಗಳಿದ್ದು ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್‌ನ್ನು ಮಾಡಿಸಿಕೊಳ್ಳಬಹುದಾಗಿದೆ. ಕಾರ್ಡ್ ಮಾಡಿಸಿಕೊಳ್ಳುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿದೆ. ಬಿ.ಪಿ.ಎಲ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ ರೂ.೫ಲಕ್ಷದ ವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇ.೩೦ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.೧.೫೦ಲಕ್ಷವಾಗಿರುತ್ತದೆ. ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ಹಾಜರುಪಡಿಸಿಯೂ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು.
ಆಯುಷ್ಮಾನ್ ಕಾರ್ಡ್ ಮಾಡಿಸುವ ಸಂದರ್ಭದಲ್ಲಿ ಸರಕಾರ ನಿಗದಿಪಡಿಸಿದಂತೆ ಪ್ರತಿ ಕಾರ್ಡ್‌ಗೆ ರೂ.೧೦ ಹಾಗೂ ಪಿವಿಸಿ ಕಾರ್ಡ್‌ಗೆ ರೂ.೩೫ನ್ನು ಪಾವತಿಸಬೇಕಾಗಿದೆ. ಸರಕಾರ ನಿಗದಿಪಡಿಸಿದ ಮೊತ್ತಕ್ಕಿಂತ ಅಧಿಕ ಮೊತ್ತವನ್ನು ಸಾರ್ವಜನಿಕರು ಪಾವತಿಸಬಾರದು. ಆಯುಷ್ಮಾನ್ ಕ್ಯಾಂಪ್ ಮಾಡಿದಲ್ಲಿ ಸಾರ್ವಜನಿಕರಿಂದ ಸರಕಾರ ನಿಗದಿಪಡಿಸಿದ ಮೊತ್ತಕ್ಕಿಂತ ಅಧಿಕ ಮೊತ್ತವನ್ನು ಪಡೆದುಕೊಂಡಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಸಿಎಸ್‌ಸಿ ಜಿಲ್ಲಾ ವ್ಯವಸ್ಥಾಪಕರು ಅಥವಾ ಸೇವಾ ಸಿಂಧುವಿನ ಜಿಲ್ಲಾ ಯೋಜನಾ ವ್ಯವಸ್ಥಾಪಕರಿಗೆ ದೂರು ನೀಡಬಹುದು. ಸೌಲಭ್ಯ ಮತ್ತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರರು ಆರೋಗ್ಯ ಸಹಾಯವಾಣಿ ೧೦೪ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.