ಅಂತರ್ರಾಜ್ಯ ಗಾಂಜಾ ಸಾಗಾಟ ಪ್ರಕರಣದ ಆರೋಪಿಗಳಿಗೆ ಪೊಲೀಸ್ ಕಸ್ಟಡಿ| ವಿಡಿಯೋ ಕಾನ್ಪರೆನ್ಸ್‌ನಲ್ಲಿ ಆದೇಶ ನೀಡಿದ ನ್ಯಾಯಾಧೀಶರು

Puttur_Advt_NewsUnder_1
Puttur_Advt_NewsUnder_1

ಪುತ್ತೂರು:ನಗರ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಅಂತರ್ರಾಜ್ಯ ಗಾಂಜಾ ಸಾಗಾಟ ಪತ್ತೆ ಮಾಡಿ ೧೭೫ ಕೆ.ಜಿ.ಗಾಂಜಾ ವಶಪಡಿಸಿಕೊಂಡ ಪ್ರಕರಣದ ಆರೋಪಿಗಳನ್ನು ೪ ದಿನಗಳವಧಿಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿಗೆ ಅಕ್ರಮವಾಗಿ ಅಪಾರ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಖಚಿತ ವರ್ತಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು.ಜೋಳದ ಲೋಡ್ ಸಾಗಿಸುತ್ತಿದ್ದ ಪಿಕಪ್ ಮತ್ತು ಅದಕ್ಕೆ ಬೆಂಗಾವಲಾಗಿ ಬರುತ್ತಿದ್ದ ಕಾರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿದ್ದ ಪೊಲೀಸರು ೧೭೫ ಕೆಜಿ ಗಾಂಜಾ ಸಮೇತವಾಗಿ ಪಿಕಪ್, ಕಾರನ್ನು ವಶಪಡಿಸಿಕೊಂಡಿದ್ದರು.ಆರೋಪಿಗಳಾದ ಕಾಸರಗೋಡು ಮಂಜೇಶ್ವರ ಮಿಜಾ ಆಯಿಷಾ ಮಂಜಿಲ್ ದೂರ್ಮಕ್ಕಾಡ್ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು(೨೬ವ), ಮಂಜೇಶ್ವರ ಹೊಸಂಗಡಿ ಮಿಜಿರ್‌ಪಳ್ಳ ಮನೆಯ ದಿ.ಮುಸ್ತಾಫ ಎಂಬವರ ಪುತ್ರ ಮೊಹಮ್ಮದ್ ಶಫಿಕ್(೩೧ವ), ವಿಟ್ಲ ಕನ್ಯಾನ ಗ್ರಾಮದ ಮಡಕುಂಜ ನಿವಾಸಿ ಅಬ್ದುಲ್ಲಾ ಎಂಬವರ ಪುತ್ರ ಖಲಂದರ್ ಶಾಫಿ(೨೬ವ) ಎಂಬವರನ್ನು ಪೊಲೀಸರು ಬಂಧಿಸಿದ್ದರು.ಬಂಧಿತ ಆರೋಪಿಗಳನ್ನು ಆ.೧೨ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಬೇಕಾಗಿತ್ತಾದರೂ ಕೋವಿಡ್ ಹಿನ್ನೆಲೆಯಲ್ಲಿ ಆರೋಪಿಗಳನ್ನು ಕೋವಿಡ್ ಆಂಟಿಜನ್ ಪರೀಕ್ಷೆಗೊಳಪಡಿಸಿ ಬಳಿಕ ಠಾಣೆಯಿಂದಲೇ ನ್ಯಾಯಾಧೀಶರೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಆರೋಪಿಗಳನ್ನು ಹಾಜರುಪಡಿಸಲಾಯಿತು.ಈ ಪ್ರಕರಣದ ಕುರಿತು ಇನ್ನೂ ಹೆಚ್ಚಿನ ತನಿಖೆ ಅಗತ್ಯವಿರುವುದರಿಂದ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಪೊಲೀಸರು ನ್ಯಾಯಾಧೀಶರಿಗೆ ಮನವಿ ಮಾಡಿದರು.ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ೪ ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.