Breaking News

ಬೆಂಗಳೂರು ಘಟನೆಯ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ – ಸಂಜೀವ ಮಠಂದೂರು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಂಗಳೂರಿನ ಕೆ.ಜೆ. ಹಳ್ಳಿ ಮತ್ತು ಡಿ.ಜಿ. ಹಳ್ಳಿ ಪ್ರದೇಶಗಳಲ್ಲಿ ವ್ಯವಸ್ಥಿತ ಹಾಗೂ ಪೂರ್ವನಿಯೋಜಿತ ಮತಾಂಧ ಕೃತ್ಯವನ್ನು ನಡೆಸಿದ ಆರೋಪಿಗಳು ಮತ್ತು ಸಂಘಟನೆಯ ವಿರುದ್ಧ ರಾಜ್ಯ ಸರಕಾರವು ನಿರ್ಧಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಅವರು ಬೆಂಗಳೂರಿನಿಂದ ಪತ್ರಕರ್ತರಿಗೆ ಮಾಹಿತಿ ನೀಡಿದ್ದು, ಮಂಗಳೂರಿನಲ್ಲಿ ನಡೆಸಿದ ವ್ಯವಸ್ಥಿತ ದಾಂಧಲೆಯ ಮಾದರಿಯಲ್ಲಿ ಬೆಂಗಳೂರಿನಲ್ಲೂ ಪುಂಡಾಟಿಕೆ ನಡೆಸಲಾಗಿದೆ. ಮಾಧ್ಯಮದವರ ಮೇಲೆ ಹಲ್ಲೆ, ಪೊಲೀಸ್ ಠಾಣೆಗೆ ದಾಳಿ ಹಾಗೂ ಸಾರ್ವಜನಿಕ ಸ್ವತ್ತುಗಳನ್ನು ಹಾಳು ಮಾಡುವ ನೀಚ ಕಾರ್ಯವನ್ನು ದುರುಳರು ನಡೆಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರಕಾರ ಯಾವುದೇ ಕಾರಣಕ್ಕೂ ಹಿಂಸೆಯನ್ನು ಸಹಿಸುವುದಿಲ್ಲ. ಹಿಂಸೆಯಲ್ಲಿ ತೊಡಗಿದವರನ್ನು ಕ್ಷಮಿಸುವುದಿಲ್ಲ ಎಂದ ಅವರು ಗಲಭೆಯಲ್ಲಿ ಪಾಲ್ಗೊಂಡ ಪುಂಡರ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು ಹಾಕುವ ಕ್ರಮ ಸ್ವಾಗತಾರ್ಹ. ಈಗಾಗಲೇ ಜಿಲ್ಲಾ ದಂಡಾಧಿಕಾರಿಯವರ ನೇತೃತ್ವದಲ್ಲಿ ಸರಕಾರ ತನಿಖೆಗೆ ಆದೇಶಿಸಿದೆ. ಇದು ಸ್ವಾಗತಾರ್ಹ ಹೆಜ್ಜೆ ಎಂದು ಮಠಂದೂರು ಅಭಿಪ್ರಾಯ ಪಟ್ಟಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.