ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆ ನಿವೃತ್ತ ಮುಖ್ಯಶಿಕ್ಷಕ ಎಲ್ಯಣ್ಣ ಗೌಡ ನಿಧನ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಶಿರಾಡಿ ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆ ನಿವೃತ್ತ ಮುಖ್ಯಶಿಕ್ಷಕ, ಕಡಬ ತಾಲೂಕಿನ ಬಳ್ಪ ಗ್ರಾಮದ ನಿವಾಸಿ ಎಲ್ಯಣ್ಣ ಗೌಡ(70ವ.)ರವರು ಆ.13ರಂದು ರಾತ್ರಿ ನಿಧನರಾಗಿದ್ದಾರೆ. ೧೯೭೫ರಲ್ಲಿ ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆಗೆ ಶಿಕ್ಷಕರಾಗಿ ಸೇರ್ಪಡೆಗೊಂಡಿದ್ದ ಇವರು ಗಣಿತ, ವಿಜ್ಞಾನ ಶಿಕ್ಷಕರಾಗಿದ್ದರು. ಬಳಿಕ ಮುಖ್ಯೋಪಾಧ್ಯಾಯರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಸುಮಾರು ೩೫ ವರ್ಷಗಳ ಕಾಲ ಉದನೆ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ೨೦೧೧ರಲ್ಲಿ ನಿವೃತ್ತರಾಗಿದ್ದರು. ಇವರ ಪತ್ನಿ ಚಂದ್ರಿಕಾರವರು ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿದ್ದು ಧರ್ಮಸ್ಥಳದಲ್ಲಿಯೇ ವಾಸವಾಗಿದ್ದರು. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಲ್ಯಣ್ಣ ಗೌಡರವರು ಆ.೧೩ರಂದು ಧರ್ಮಸ್ಥಳದ ಮನೆಯಲ್ಲಿ ನಿಧನರಾಗಿದ್ದಾರೆ. ಬಳಿಕ ಮೃತದೇಹವನ್ನು ಬಳ್ಪದ ಮೂಲಮನೆಗೆ ಕೊಂಡೊಯ್ಯಲಾಗಿದ್ದು ಆ.೧೪ರಂದು ಮಧ್ಯಾಹ್ನದ ವೇಳೆಗೆ ಅಂತ್ಯಕ್ರಿಯೆ ನಡೆಸಲಾಗಿದೆ. ಹಲವು ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಎಲ್ಯಣ್ಣ ಗೌಡರವರ ನಿಧನಕ್ಕೆ ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್‌ರವರು ಸಂತಾಪ ಸೂಚಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.