ಚಾರ್ವಾಕ ಸಿ.ಎ ಬ್ಯಾಂಕಿನ ಪ್ರಧಾನ ಕಚೇರಿ ಕಾಣಿಯೂರಿನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಛೇರಿ ಕಾಣಿಯೂರು ಹಾಗೂ ಸಂಘದ ಶಾಖಾ ಕಛೇರಿ ಮುದುವದಲ್ಲಿ ೭೪ನೇ ಸ್ವಾತಂತ್ರೋತ್ಸವ ದಿನಾಚರಣೆಯು ನಡೆಯಿತು. ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಧರ್ಮೇಂದ್ರ ಗೌಡ ಕಟ್ಟತ್ತಾರು, ಅನಂತ್ ಕುಮಾರ್ ಬೈಲಂಗಡಿ, ವಿಶ್ವನಾಥ ಕೂಡಿಗೆ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದುನಡ್ಕ, ಕಾಣಿಯೂರು ಬಿ.ಕೆ ಕಾಂಪ್ಲೇಕ್ ಮಾಲಕ ಪ್ರದೀಪ್ ಬೊಬ್ಬೆಕೇರಿ, ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ ಚೇತನ್ ನಾವೂರು, ಶಿವರಾಮ ರೈ ಉಪಸ್ಥಿತರಿದ್ದರು. ಹವ್ಯಾ, ರಮ್ಯ, ಅಕ್ಷರ ಧ್ವಜಗೀತೆ ಹಾಡಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಾಖಾವ್ಯವಸ್ಥಾಪಕ ಬಾಲಕೃಷ್ಣ ರೈ ಕಾಸ್ಪಾಡಿಗುತ್ತು ವಂದಿಸಿದರು. ಸಿಬ್ಬಂದಿಗಳಾದ ಮೋನಪ್ಪ ಗೌಡ, ವಾಣಿ, ಭವತ್ ಅಗಳಿ, ಪುನಿತ್ ಬಂಡಾಜೆ, ವಸಂತಿ, ವಿನಯ್, ವೇಣುಗೋಪಾಲ, ಕೇಶವ ಗೌಡ, ಈಶ್ವರ ಸಹಕರಿಸಿದರು.

ಮುದುವ ಶಾಖೆ: ಚಾರ್ವಾಕ ಪ್ರಾ.ಕೃ,ಪ.ಸ. ಸಂಘದ ಮುದುವ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕ ಹರೀಶ್ ಅಂಬುಲ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಕೇಶವ ಕರಂದ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.