Breaking News

ವಿದ್ಯಾರಶ್ಮಿಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು. ಧ್ವಜಾರೋಹಣಗೈದು ಮಾತನಾಡಿದ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರವಲ್ಲ, ಬದಲಿಗೆ ಅದು ಜವಾಬ್ದಾರಿಯ ನಿರ್ವಹಣೆ ಎಂದರು. ಇಂದು ನಾವು ರಾಷ್ಟ್ರ ಪ್ರಥಮ ಎಂಬ ಧ್ಯೇಯದೊಂದಿಗೆ ಕಾರ್ಯಪ್ರವೃತ್ತರಾದರೆ ಮಾತ್ರವೇ ಸಶಕ್ತ ಭಾರತ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ಪಟ್ಟ ಅವರು ನಾವು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕಾದರೆ ನಮ್ಮ ಆಲೋಚನೆಗಳನ್ನು ಬದಲಾಯಿಸಿಕೊಂಡು ನಮ್ಮ ಮನೆಯಿಂದಲೇ ಅವುಗಳ ಅಳವಡಿಕೆಯನ್ನು ಮಾಡಬೇಕು ಎಂದರು.

ಸಂಸ್ಥೆಗಳ ವಿಶ್ವಸ್ಥ ಮಂಡಳಿ ಸದಸ್ಯ ಎನ್. ಸುಂದರ ರೈ ಮತ್ತು ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಅವರು ಉಪಸ್ಥಿತರಿದ್ದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮಿ ಎಸ್. ರೈ ಅವರು ಸ್ವಾಗತಿಸಿ ವಿದ್ಯಾರಶ್ಮಿ ವಿದ್ಯಾಲಯದ ಉಪಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಅವರು ವಂದನಾರ್ಪಣೆಗೈದರು. ಬೋಧಕ ಸಿಬ್ಬಂದಿಯವರಾದ ರೋಹಿತ್, ಜಯಶ್ರೀ ಮತ್ತು ಮಂಗಳಾ ಅವರು ವಿವಿಧ ಕಾರ್ಯಗಳಲ್ಲಿ ಸಹಕರಿಸಿದರು. ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ನಿರೂಪಣೆಗೈದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.