ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ನರಿಮೊಗರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಸರಕಾರದ ಆದೇಶದಂತೆ ಸರಳವಾಗಿ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ತ್ಯಾಗ-ಬಲಿದಾನಗಳು ವ್ಯರ್ಥವಾಗಬಾರದು ನಾವು ದೇಶಪ್ರೇಮ ಮೈಗೂಡಿಸುವುದರ ಜೊತೆಗೆ ಇನ್ನೊಬ್ಬರಿಗೆ ಸ್ಫೂರ್ತಿಯಾಗಬೇಕು ಎಂದರು.

ಸಂಚಾಲಕರಾದ  ಭಾಸ್ಕರ ಆಚಾರ್ ಹಿಂದಾರ್ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ತಿಳಿಸಿದರು. ಕಾರ್ಯದರ್ಶಿಗಳಾದ  ಕೃಷ್ಣಪ್ರಸಾದ್ ಕೆದಿಲಾಯರು ಮಾತಾಡಿ ಭಾರತ ಸ್ವಾವಲಂಬಿ ಜೀವನದತ್ತ ಹೆಜ್ಜೆಯಿಡುವ ನಿಟ್ಟಿನಲ್ಲಿ ನಾವೆಲ್ಲ ಪ್ರಯತ್ನಿಸಬೇಕು ಎಂದರು.
 
ಈ ಸಂದರ್ಭದಲ್ಲಿ ಹತ್ತನೇ ತರಗತಿ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆಯುವಲ್ಲಿ ಮಾರ್ಗದರ್ಶನ ಮಾಡಿದ ವಿಜ್ಞಾನ ಶಿಕ್ಷಕಿಯಾದ ಕು. ಕವಿತಾ ಇವರನ್ನು ಅಭಿನಂದಿಸಿದರು.  ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಹರೀಶ್ ಪುತ್ತೂರಾಯ, ಶ್ರೀ ವೆಂಕಟಕೃಷ್ಣ ಕೆ.ಕೆ, ಶ್ರೀ ಎಸ್ . ಜೆ ಕೃಷ್ಣ, ಶ್ರೀ ಸುಬ್ರಾಯ ಬಿ.ಎಸ್, ಶ್ರೀ ಪ್ರಸನ್ನ ಭಟ್ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಯರು ಹಾಗೂ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಜಯಮಾಲಾ ವಿ. ಎನ್ ಪ್ರಾಸ್ತಾವಿಕ ಮಾತಿನೊಂದಿಗೆ ಎಲ್ಲರನ್ನು ಸ್ವಾಗತಿಸಿದರು.. ಶ್ರೀಮತಿ ಅನಿತಾ ವಂದಿಸಿ , ಶ್ರೀಮತಿ ಉಷಾ ನಿರೂಪಿಸಿದರು.. ಬುಲ್ ಬುಲ್ ವಿದ್ಯಾರ್ಥಿನಿ ಅವನಿ ಎಸ್ ಪಿ ಧ್ವಜಾರೋಹಣ ಕಾರ್ಯಕ್ರಮದ ನಾಯಕತ್ವ ವಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.