ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ

Puttur_Advt_NewsUnder_1
Puttur_Advt_NewsUnder_1

  
ಪುತ್ತೂರು:  ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಕೊರೋನಾ ಮಹಾಮಾರಿಯ ನಡುವೆ ೭೪ನೇ ಸ್ವಾತಂತ್ರ್ಯೋತ್ಸದ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಇವರ ಮುತುವರ್ಜಿಯಿಂದ ಪ್ರಪ್ರಥಮವಾಗಿ ಝೂಮ್ ಆಪ್ ತಂತ್ರಜ್ಞಾನದೊಂದಿಗೆ ಮಕ್ಕಳಿಗೆ ನೇರ ಪ್ರಸಾರ ಮಾಡುವ ಮೂಲಕ ಆಚರಿಸಲಾಯಿತು.

ಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವಕ್ಕೆ ಮಕ್ಕಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಪ್ರಖ್ಯಾತ ವಕೀಲರಾದ ದುರ್ಗಾಪ್ರಸಾದ್ ರೈ ಕುಂಬ್ರ ಇವರು ಈ ವರ್ಷದ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಶೈಕ್ಷಣಿಕ ವರ್ಷದ ತಂತ್ರಜ್ಞಾನಕ್ಕೆ ತಾವೆಲ್ಲರೂ ಹೊಂದಿಕೊಂಡು ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಶಿಕ್ಷಕಿ ಗಾಯತ್ರಿ ಎಸ್ ರವರು ಶಿಕ್ಷಕಿಯವರ ಪರವಾಗಿ ಸ್ವಾತಂತ್ರ್ಯೋತ್ಸವಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರಾದ ರಾಧಾಕೃಷ್ಣ ರೈ ಬೂಡಿಯಾರು, ಚಂದ್ರಹಾಸ ಶೆಟ್ಟಿ ಬಿ ನಡುಬೈಲು, ಜಯಪ್ರಕಾಶ್ ರೈ ನೂಜಿಬೈಲು, ನಿರಂಜನ ರೈ ಮಠಂದಬೆಟ್ಟು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಝೂಮ್ ಆಪ್‌ನ ನೇತೃತ್ವವನ್ನು ವಹಿಸಿದ್ದ ವಾಸುದೇವ ಮೂರ್ತಿ, ಕೆ.ಸಿ. ಅಶೋಕ ಶೆಟ್ಟಿ, ರವಿಪ್ರಸಾದ್ ಶೆಟ್ಟಿ ಬನ್ನೂರು, ಅಬ್ದುಲ್ ರಹಿಮಾನ್, ರಂಜಿತಾ ಶೆಟ್ಟಿ, ಕಿರಣ್ ಚಂದ್ರ, ವಿದ್ಯಾರ್ಥಿ ಪೋಷಕರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಜರಿದ್ದರು.

ಸ್ವಾತಂತ್ರ್ಯೋತ್ಸದ ಪ್ರಯುಕ್ತ ಆನ್‌ಲೈನ್ ಮೂಲಕ ಪ್ರಬಂಧ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳ ಪರವಾಗಿ ಕಾರ್ಯಕ್ರಮದಲ್ಲಿ ಹಾಜರಿದ್ದ ವಿದ್ಯಾರ್ಥಿಗಳ ಪೋಷಕರಿಗೆ ಬಹುಮಾನವನ್ನು ವಿತರಿಸಲಾಯಿತು.  ಶಾಲಾ ಮುಖ್ಯೋಪಾಧ್ಯಾಯಿನಿ ರೂಪಕಲಾ ಕೆ ಯವರು ಸ್ವಾಗತಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ಜಯಲಕ್ಷ್ಮಿ ಎ ಯವರು ವಂದಿಸಿದರು. ಶಿಕ್ಷಕಿ ಪ್ರೀತಾ ಎನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.