ವಿಟ್ಲ: ವಿಷಸೇವಿಸಿ ವ್ಯಕ್ತಿ ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1


ವಿಟ್ಲ:  ವಿಷ ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಬಸವಲಚ್ಚಿಲ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ವಿಟ್ಲದ ಬಸವಲಚ್ಚಿಲ್ ಲಕ್ಮಣ ಗೌಡ(50 ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಲಕ್ಷ್ಮಣ ಗೌಡರವರು ಕೃಷಿ ಕೆಲಸ ಮಾಡಿಕೊಂಡಿದ್ದು, ಉಬ್ಬಸ ರೋಗದಿಂದ ಬಳಲುತ್ತಿದ್ದರು. ಆ.೧೪ರಂದು  ತೋಟದಿಂದ ಬಂದವರು ಅಸ್ವಸ್ಥರಾಗಿದ್ದರು. ಇದರಿಂದ ಸಂಶಯಗೊಂಡ ಮನೆಯವರು ಅವರ ಪ್ಯಾಂಟ್ ಕಿಸೆಯನ್ನು ಪರುಶೀಲನೆ ನಡೆಸಿದಾಗ ಅದರಲ್ಲಿ  ವಿಷ ಪದಾರ್ಥ ಕಂಡು ಬಂದಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಿದ್ದು, ಸಾಯಂಕಾಲದ ವೇಳೆ  ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.