ಟಿಂಬರ್ ಉದ್ಯಮಿ ಬಿ. ಅಹ್ಮದ್ ಹಾಜಿ ತುಂಬೆ ನಿಧನ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89 ವ.) ರವರು ಅಲ್ಪಕಾಲದ ಅಸೌಖ್ಯದಿಂದ ಆ.೧೬ರಂದು  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅಹ್ಮದ್ ಹಾಜಿ ರವರು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.‌ ಆ.೧೬ರಂದು ಅವರು ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.  ಟಿಂಬರ್ ಉದ್ಯಮವನ್ನು ಮಾಡುತ್ತಿದ್ದ ಅಹ್ಮದ್ ಹಾಜಿ ರವರು ಶಿಕ್ಷಣ ಪ್ರೇಮಿಯಾಗಿದ್ದು ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ವಿತೀಯ ಸಾಧಕರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಸಂಘ ಸಂಸ್ಥೆಗಳು, ಮಸೀದಿಗಳ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.  ಆ.16ರ ಸಂಜೆ 3:30ರ ವೇಳೆಗೆ ತುಂಬೆ ಕಾಲೇಜಿನ ವಠಾರದಲ್ಲಿ ಜನಾಝ ನಮಾಝ್ ಗೆ ವ್ಯವಸ್ಥೆ ಮಾಡಲಾಗಿದೆ‌. ಬಳಿಕ ತುಂಬೆ ಜುಮಾ ಮಸೀದಿಯ ಆಧೀನದ ಖಬರ್ ಸ್ಥಾನದಲ್ಲಿ ದಫನ ಕಾರ್ಯ ನಡೆಯಲಿದೆ.  ಮೃತರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.