ತಿಂಗಳಾಡಿ ರೋಟರ‍್ಯಾಕ್ಟ್ ಕ್ಲಬ್‌ನಿಂದ ಆಟಿದ ಕೂಟ, ಸ್ವಾತಂತ್ರ್ಯ ದಿನಾಚರಣೆ, ಎಸ್‌ಎಸ್‌ಎಲ್‌ಸಿ ಸಾಧಕಿಗೆ ಸನ್ಮಾನ

ಪುತ್ತೂರು: ರೋಟ್ರಾಕ್ಟ್ ಕ್ಲಬ್ ತಿಂಗಳಾಡಿ ಇದರ ವತಿಯಿಂದ 74ನೇ ಸ್ವಾತಂತ್ರೋತ್ಸವ ದಿನಾಚರಣೆ ಮತ್ತು ಆಟಿದ ಕೂಟವನ್ನು ಆ.೧೫ ರಂದು ತಿಂಗಳಾಡಿ ದೇವತಾ ಭಜನಾ ಮಂದಿರದ ವಠಾರದಲ್ಲಿ ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ ಸಿಶೇ ಕಜೆಮಾರ್‌ರವರು ಆಟಿಯ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಿದರು. ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷ ಸನತ್ ಕುಮಾರ್ ರೈಯವರು ಸ್ವಾತಂತ್ರ್ಯ ದಿನಾಚರಣೆಯ ವಿಶೇಷತೆ ವಿಶಿಷ್ಟತೆಗಳ ಬಗ್ಗೆ ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಕೆದಂಬಾಡಿ ಗ್ರಾಮದ ಅನನ್ಯರವರನ್ನು ಕ್ಲಬ್ಬಿನ ವತಿಯಿಂದ ಸನ್ಮಾನಿಸಲಾಯಿತು. ಸಭಾಪತಿ ಶರತ್ ಗೌಡ ಗುತ್ತು ಕಾರ್ಯಕ್ರಮದ ವಿಶೇಷತೆಯ ಬಗ್ಗೆ ತಿಳಿಸಿದರು. ಕ್ಲಬ್ಬಿನ ಅಧ್ಯಕ್ಷ ಹರೀಶ್ ರೈ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ , ಕಾರ್ಯದರ್ಶಿ ವರುಣ್ ವಂದಿಸಿದರು. ಸಭೆಯಲ್ಲಿ ರೋಟೆರಿಯನ್ ಮಿತ್ರರು, ಗಣ್ಯರು, ರೋಟರ‍್ಯಾಕ್ಟ್ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.