ಆರೋಗ್ಯ ಕಾಳಜಿ, ಬಡತನ ನಿರ್ಮೂಲನೆ ಮಾಡಲು ಬಿಜೆಪಿಯಿಂದ ಹತ್ತಾರು ಕಾರ್ಯಕ್ರಮ- ಉಚಿತ ಆಯುಷ್ಮಾನ್ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ದೇಶದಲ್ಲಿ ಮತ್ತು ರಾಜ್ಯದಲ್ಲಿ ಅಡಳಿತ ಮಾಡುತ್ತಿರುವ ಬಿಜೆಪಿ ಸರಕಾರ ಜನರ ಆರೋಗ್ಯದ ಕಾಳಜಿ ಮತ್ತು ಬಡತನ ನಿರ್ಮೂಲನೆ ಮಾಡಲು ಹತ್ತಾರು ಕಾರ್ಯಕ್ರಮ ಹಾಕಿಕೊಂಡಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ಹೇಳಿದರು. ಇಲ್ಲಿನ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಬಿಜೆಪಿ ಪುತ್ತೂರು ನಗರ ಮಂಡಲ ಯುವ ಮೋರ್ಚಾದ ವತಿಯಿಂದ ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯಡಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ದೀನದಲಿತರು, ಹಿಂದುಳಿದ ವರ್ಗದವರು, ಬಡತನರೇಖೆಗಿಂತ ಕೆಳಗಿರುವರನ್ನು ಜೀವನ ಸುಧಾರಣೆ ಮಾಡಲು ದೀನ್ ದಯಾಳ್ ಉಪಾಧ್ಯಾಯರು ಅಂತ್ಯೋದಯ ವ್ಯವಸ್ಥೆಯನ್ನು ಕಂಡುಕೊಂಡರು. ಅಂತಹ ವ್ಯವಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಡಿಜಿಟಲೈಷನ್ ಮೂಲಕ ಫಲಾನುಭವಿಗಳ ಮನೆ ಬಾಗಿಲಿಗೆ ನೇರ ಅವರ ಖಾತೆಗೆ ತಲುಪಿಸುವ ವ್ಯವಸ್ಥೆ ಮಾಡಿದರು. ಆದರೆ ಗ್ರಾಮೀಣ ಭಾಗದ ಜನರಿಗೆ ನೆಟ್‌ವರ್ಕ್ ಸಮಸ್ಯೆಯಿಂದ ಒಂದಷ್ಟು ಸಮಸ್ಯೆ ಆಗಬಾರದು ಎಂದು ಸೇವಾ ಸಂಘ ಸಂಸ್ಥೆಗಳ ಮೂಲಕ ಕೆಲಸ ಮಾಡಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿನೂತನವಾದ ಬಡವರಿಗೆ ಅತ್ಯಮೂಲ್ಯವಾದ ಕಾರ್ಯಕ್ರಮ ಯುವ ಮೋರ್ಛಾದಿಂದ ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಮಧ್ಯಮವರ್ಗದವರಿಗೂ ಸವಲತ್ತು:
ಪ್ರಧಾನಿಯವರು ಸ್ವಾತಂತ್ರ್ಯದ ದಿನ ನೀಡಿದ ಸಂದೇಶದಂತೆ ಯಾರೂ ಕೂಡಾ ಸವಲತ್ತಿನಿಂದ ವಂಚಿತರಾಗಬಾರದು ಎಂದು ಮಧ್ಯಮವರ್ಗದವರಿಗೂ ಸವಲತ್ತು ಕೊಡಲು ಕೇಂದ್ರ ಸರಕಾರ ತೀರ್ಮಾಣ ಮಾಡಿದೆ. ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ಜೊತೆ ಒಟ್ಟಾಗಿ ಆರೋಗ್ಯ ಚಿಕಿತ್ಸೆ ನೀಡುವ ಕಾರ್ಯ ನಡೆಯುತ್ತಿದೆ. ಅದೇ ರೀತಿ ಕಷ್ಟದಲ್ಲಿ ಜೀವನ ಮಾಡುತ್ತಿರುವ ಸಂದರ್ಭದಲ್ಲಿ ಮೂರು ತಿಂಗಳು ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ನೀಡಲಾಗಿದೆ. ಬಡರವ ಖಾತೆಗೆ ನೇರ ಹಣ ಪಾವತಿ ಆಗಿದೆ. ಕಾರ್ಮಿಕರಿಗೂ ಕಿಟ್ ವಿತರಣೆ, ವಿವಿಧ ರೀತಿಯ ಕೆಲಸದಲ್ಲಿರುವ ಕಾರ್ಮಿಕರಿಗೂ ಸೌಲಭ್ಯ, ಬಡತನ ರೇಖೆಗಿಂತ ಕೆಳಗಿನವರಿಎ ಬಡತನ ನಿರ್ಮೂಲನೆ ಮಾಡಲು ಹತ್ತಾರು ಕಾರ್ಯಕ್ರಮ ಮಾಡಲಾಗುತ್ತಿದೆ. ಈ ಎಲ್ಲಾ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದು ಆರೋಗ್ಯ ಕಾಪಾಡಿ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಗುರುದತ್ತ್ ನಾಯಕ್, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಜನಸೇವಾ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ೨ ದಿನಗಳು ನಡೆಯುವ ಆಯಷ್ಮಾನ್ ವಿತರಣೆ ಕಾರ್ಯದಲ್ಲಿ ಸಹಕಾರ ನೀಡುತ್ತಿರುವ ಮೇದಿನಿ ಜನಸೇವಾ ಕೇಂದ್ರ, ಪೂಜಾ ಜನಸೇವಾ ಕೇಂದ್ರ, ಶ್ರೀಪದ್ಮ ಜನಸೇವಾ ಕೇಂದ್ರ, ಅಶೋಕ್ ಪಡೀಲ್ ಜನಸೇವಾ ಕೇಂದ್ರದ ಮಾಲಕರನ್ನು ಗೌರವಿಸಲಾಯಿತು. ಕೌಶಿಕ್, ತೇಜಸ್, ಕಿರಣ್ ಶಂಕರ್ ಮಲ್ಯ, ಶವೀನ್, ಜಗದೀಶ್, ಜಗದೀಶ್, ಯಜ್ಞೇಶ್ ಅತಿಥಿಗಳನ್ನು ಗೌರವಿಸಿದರು. ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಕಿಶೋರ್ ಕೊಳತ್ತಾಯ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲದ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಗರಸಭಾ ಸದಸ್ಯೆ ಗೌರಿ ಬನ್ನೂರು ಪ್ರಾರ್ಥಿಸಿದರು. ನಗರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಸಚಿನ್ ಶೆಣೈ ಸ್ವಾಗತಿಸಿದರು. ರಾಜಗೋಪಾಲ್ ಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ ವಂದಿಸಿರು.

ಬೆಳಿಗ್ಗೆ ೮ ಗಂಟೆಯಿಂದ ಸಂಜೆ ಗಂಟೆ ೫ರ ತನಕ ಈ ಕಾರ್ಯಕ್ರಮ ನಡೆಯಲಿದೆ. ಆ.೧೮ರಂದೂ ಕೂಡಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ತಾವು ತಮ್ಮ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ನೊಂದಿಗೆ ಆಗಮಿಸಿ ಈ ಸೌಲಭ್ಯದ ಸದುಪಯೋಗ ಪಡೆದು ಕೊಳ್ಳಬೇಕು. ಸಚಿನ್ ಶೆಣೈ, ಅಧ್ಯಕ್ಷರು ಬಿಜೆಪಿ ಯುವ ಮೋರ್ಚಾ ಪುತ್ತೂರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.