ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಗೌರವಧನ ಪಾವತಿಸುವಂತೆ ಎಸ್‌ಡಿಪಿಐ ಮನವಿ

Puttur_Advt_NewsUnder_1
Puttur_Advt_NewsUnder_1

ಕಡಬ: ಶಾಲೆಗಳಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ಸಿಬ್ಬಂದಿಗಳ ಗೌರವಧನ ಬಿಡುಗಡೆಗೊಳಿಸುವಂತೆ ಎಸ್‌ಡಿಪಿಐ ರಾಜ್ಯ ಸರಕಾರಕ್ಕೆ ಮನವಿ ಮಾಡಿದೆ.

ರಾಜ್ಯದ ೫೪ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ೧.೭೦ಲಕ್ಷ ಮಂದಿ ಅಡುಗೆ ಹಾಗೂ ಅಡುಗೆ ಸಹಾಯಕಿಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಸರ್ಕಾರ ಕಳೆದ ೫ ತಿಂಗಳಿಂದ ಗೌರವಧನ ನೀಡಿಲ್ಲ. ಲಾಕ್‌ಡೌನ್‌ನಿಂದಾಗಿ ಇತರೆ ಬೇರೆ ಕೆಲಸ ಸಹ ಸಿಗದೆ ಅಡುಗೆ ಸಿಬ್ಬಂದಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಡಿ ಗ್ರೂಪ್ ನೌಕರರ ಸಂಖ್ಯೆ ಕಡಿಮೆ ಇದ್ದು, ಕೆಲವು ಶಾಲೆಗಳಲ್ಲಿ ಡಿ ಗ್ರೂಪ್ ನೌಕರರೇ ಇಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ಅಡುಗೆ ಕೆಲಸದ ಜೊತೆಗೆ ಶಾಲೆಯ ಸ್ವಚ್ಛತೆ ಮತ್ತು ಇತರೇ ಕೆಲಸ ಸಹ ಮಾಡುತ್ತಿದ್ದರು. ಹೀಗೆ ಶಾಲೆಗಳಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಅವರ ಸೇವೆಗೆ ತಕ್ಕ ಪ್ರತಿಫಲ ನೀಡಬೇಕಾಗಿದೆ. ಆದ್ದರಿಂದ ಈ ಸಿಬ್ಬಂದಿಗಳಿಗೆ ಕಳೆದ ೫ ತಿಂಗಳ ಗೌರವಧನವನ್ನು ಏಕಕಾಲಕ್ಕೆ ಪಾವತಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿ ಕಡಬ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದೆ. ಎಸ್‌ಡಿಪಿಐ ತಾಲೂಕು ಸಮಿತಿ ಉಪಾಧ್ಯಕ್ಷ ನೌಶದ್, ಖಜಾಂಚಿ ಹಾರೀಸ್, ಸದಸ್ಯರಾದ ಕಮರುದ್ದೀನ್, ನೆಬಿಶಾನ್‌ರವರು ಮನವಿ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.