ಪುತ್ತೂರು ಕಾಂಗ್ರೆಸ್ ವತಿಯಿಂದ ಕೊರೋನಾ ವಾರಿಯರ್ಸ್‌ಗೆ ತರಬೇತಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಯೋಜನೆಯಾದ ಪ್ರತಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಆರೋಗ್ಯ ಹಸ್ತ ಕಾರ್ಯಕ್ರಮದ ಅಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಕೊರೋನಾ ವಾರಿಯರ್ಸ್‌ಗೆ ನುರಿತ ವೈದ್ಯರಿಂದ ತರಬೇತಿ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಕಿಟ್ ವಿತರಣಾ ಕಾರ್ಯಕ್ರಮ ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಯುನಿಟಿ ಆಸ್ಪತ್ರೆಯ ವೈದ್ಯ ಡಾ.ಸಾಯಿಪ್ರಕಾಶ್ ರೈ ರವರು ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಗೊಂಡ ೭೪ ಮಂದಿ ಕೊರೋನಾ ವಾರಿಯರ್ಸ್ ಕಾರ್ಯಕರ್ತರಿಗೆ ತರಬೇತಿ ನೀಡಿ ಆರೋಗ್ಯ ತಪಾಸಣಾ ಕಿಟ್ ನೀಡಿ ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಕೊರೋನಾ ವಾರಿಯರ್ಸ್‌ದಾರರು ಯಾವ ರೀತಿ ಕಾರ್ಯಪ್ರವೃತ್ತರಾಗಬೇಕೆಂಬ ಕುರಿತು ವಿವರಣೆ ನೀಡಿದರು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು ಮಾತನಾಡಿ ಕಾಂಗ್ರೆಸ್ ಕಾರ್ಯಕರ್ತ ಕೊರೋನಾ ವಾರಿಯರ್ಸ್‌ದಾರರು ಪ್ರತಿ ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರ ಒಪ್ಪಿಗೆ ಪಡೆದು ಆರೋಗ್ಯ ವಿಚಾರಿಸುವಂತಾಗಬೇಕು. ಒತ್ತಾಯ ಪೂರ್ವಕ ಮಾಡದೇ ಅವರೇ ಮುಂದೆ ಬಂದು ತಪಾಸಣೆಗೆ ಒಳಪಡುವಂತೆ ಮಾಡಬೇಕು ಎಂದು ಹೇಳಿದರು. ನೆರೆಕರೆಯವರಲ್ಲಿ ಆರೋಗ್ಯ ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷ ನೀಡಿದ ಈ ಯೋಜನೆ ಉತ್ತಮ ಕಾರ್ಯಕ್ರಮವಾಗಿದ್ದು, ಆಯ್ಕೆಗೊಂಡು ತರಬೇತಿ ಪಡೆದ ಕಾಂಗ್ರೆಸ್ ಕಾರ್ಯಕರ್ತ ವಾರಿಯರ್ಸ್‌ಗಳಿಗೆ ರೂ. ೨ಲಕ್ಷ ಇನ್ಸೂರೆನ್ಸ್ ಕವರೇಜ್ ಸಿಗಲಿದೆ ಎಂದು ಹೇಳಿದರು.

ಕೆಪಿಸಿಸಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಸಂಯೋಜಕರಾದ ಟಿ.ಪಿರಮೇಶ್ ಅವರು ಮಾತನಾಡಿ ಈ ಯೋಜನೆಯಡಿಯಂತೆ ಪ್ರತಿಯೊಂದು ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವಂತೆ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಕೊರೋನಾ ವಾರಿಯರ್ಸ್ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ಭಾವುಟವನ್ನು ಹಿಡಿದುಕೊಳ್ಳಬೇಕೆಂದು ಹೇಳಿದರು. ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕಾರ್ಯಕರ್ತರು ಉತ್ತಮವಾಗಿ ವರ್ತಿಸಬೇಕು. ಪಕ್ಷಕ್ಕೆ ಕೆಟ್ಟ ಹೆಸರು ಬಾರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು

ಪುತ್ತೂರು ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಅವರು ಸ್ವಾಗತಿಸಿ ಮಾತನಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಯೋಜನೆಯಾದ ಆರೋಗ್ಯ ಹಸ್ತಾ ಕಾರ್ಯಕ್ರಮದಡಿಯಲ್ಲಿ ನಾವು ಈಗಾಗಲೇ ಕಾರ್ಯಪ್ರವೃತರಾಗಿದ್ದೇವೆ. ಅದರಂತೆ ಪುತ್ತೂರು ಬ್ಲಾಕ್‌ನ ವ್ಯಾಪ್ತಿಗೆ ಒಳಪಟ್ಟ ಗ್ರಾಮೀಣ ಪ್ರದೇಶಗಳಿಂದ ತಲಾ ಇಬ್ಬರಂತೆ ೨೬ ಮಂದಿ ಹಾಗೂ ನಗರ ಪ್ರದೇಶದಿಂದ ೧೦ ಮಂದಿ ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್‌ನಿಂದ ೩೮ ಮಂದಿಯಂತೆ ಒಟ್ಟು ೭೪ ಮಂದಿಯನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ ನುರಿತ ವೈದ್ಯರಿಂದ ತರಬೇತಿ ನೀಡಲಾಗುತ್ತಿದೆ. ಈ ತರಬೇತಿ ಪಡೆದವರು ಆರೋಗ್ಯ ಕಿಟ್ ಅನ್ನು ಪಡೆದು ಕೊಂಡು ಪ್ರತಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ನ್ಯಾಯವಾಗಿ ವೆಂಕಪ್ಪ ಗೌಡ ಸುಳ್ಯ, ಕೆಪಿಸಿಸಿ ಸಂಯೋಜಕ ಉಸ್ಮಾನ್, ಕೆಪಿಸಿಸಿ ಸದಸ್ಯ ಎಂ.ಬಿ.ವಿಶ್ವನಾಥ ರೈ, ಪುತ್ತೂರು ನಗರ ಯೋಜನಾಪ್ರಾಧಿಕಾರದ ಮಾಜಿ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಉಪಸ್ಥಿತರಿದ್ದರು. ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ವಂದಿಸಿ, ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ್ ಆಳ್ವ ಮತ್ತು ಅಮಲ ರಾಮಚಂದ್ರ, ಇಸಾಕ್ ಸಾಲ್ಮರ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಜ್, ಯಂಗ್‌ಬ್ರಿಗೇಡ್ ಅಧ್ಯಕ್ಷ ರಮೇಶ್, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಮೋನು ಬಪ್ಪಳಿಗೆ, ಇಬ್ರಾಹಿಂ ಬಾತಿಷಾ ಸಾಲ್ಮರ ಮತ್ತಿತರರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.