Breaking News

ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ 35 ನೇ ವರ್ಷದ ಗಣೇಶೋತ್ಸವ ಆಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಟ್ಟಂಪಾಡಿ ಶ್ರೀಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ 35 ನೇ ವರ್ಷದ ಗಣೇಶೋತ್ಸವ ಆಚರಣೆ ಸರಳವಾಗಿ ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಪ್ರತಿಷ್ಠೆ ನಡೆಯಿತು. ಸಮಿತಿಯ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ ಧ್ವಜರೋಹಣ ನಡೆಸಿ ಬಾಲಗಂಗಾಧರ ತಿಲಕ್ ರವರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ಭಜನಾ ಸಂಘ ಹಾಗೂ ಬ್ರಮರಾಂಬಿಕಾ ಭಜನಾ ಸಂಘದವರಿಂದ ಭಜನೆ, ಗಣಪತಿ ಹೋಮ, ಪ್ರಸಾದ ವಿತರಣೆ ಬಳಿಕ ಚೆಲ್ಯಡ್ಕ ನದಿಯಲ್ಲಿ ವಿಗ್ರಹ ಜಲಸ್ಥಂಬನ ನಡೆಯಿತು. ಪುರೋಹಿತರಾದ ಬೆಟ್ಟಂಪಾಡಿ ವೆಂಕಟ್ರಮಣ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ಅನುವಂಶಿಕ ಆಡಳಿತ ಮೋಕ್ತೇಸರ ವಿನೋದ್ ಬಲ್ಲಾಳ್ ಬೀಡು, ಮೋಕ್ತೇಸರ ವಿನೋದ್ ರೈ ಗುತ್ತು, ಗಣೇಶೋತ್ಸವ ಸಮಿತಿ ಅಧ್ಯಕ್ಷ ನಾಗೇಶ್ ರೈ ಮೂರ್ಕಜೆ, ಪ್ರಧಾನ ಕಾರ್ಯದರ್ಶಿ ರಮೇಶ್ ಗೌಡ ಬಳ್ಳಿತ್ತಡ್ಡ, ಕೋಶಾಧಿಕಾರಿ ಉದಯ ಕುಮಾರ್ ಕಕ್ಕೂರು ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.