ಕೇಂದ್ರ ಸರಕಾರದಿಂದ ಜನವಿರೋಧಿ ಧೋರಣೆ ಆರೋಪಿಸಿ ಸಿಪಿಐಎಂ ದೇಶವ್ಯಾಪ್ತಿ ಮುಷ್ಕರ – ಪುತ್ತೂರಿನಲ್ಲೂ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮೋದಿ ನೇತೃತ್ವದ ಕೇಂದ್ರ ಸರಕಾರದಿಂದ ಜನವಿರೋಧಿ ನೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯುನಿಷ್ಟ್ ಪಕ್ಷ(ಸಿಪಿಐಎಂ) ಪುತ್ತೂರು ತಾಲೂಕು ಸಮಿತಿ ವತಿಯಿಂದ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಲಾಯಿತು.

ಸಿಪಿಐಎಂ ಜಿಲ್ಲಾ ಮುಖಂಡ ರಾಮಣ್ಣ ವಿಟ್ಲ ಅವರು ಮಾತನಾಡಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಎದುರಿಸಿ ಇಂದಿನಿಂದ ಆ.೨೯ರ ತನಕ ಒಂದು ವಾರಗಳ ದೇಶವ್ಯಾಪಿ ಮುಷ್ಕರ ನಡೆಯುತ್ತಿದೆ. ಪ್ರಸ್ತುತ ದೇಶದಲ್ಲಿ ಬ್ರಿಟೀಷರಿಂದಲೂ ದೊಡ್ಡ ಮಟ್ಟದ ದಬ್ಬಾಳಿಕೆ ನಡೆಯುತ್ತಿದೆ. ಬಡವರು, ಕಾರ್ಮಿಕರ ಬದುಕು ಅತಂತ್ರವಾಗಿದೆ ಎಂದು ಹೇಳಿದರು. ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಬಾಲಕೃಷ್ಣ ಶೆಟ್ಟಿ ಮಾತನಾಡಿ ಕೊರೊನಾ ನಡುವೆ ಜನರಿಗೆ ಭದ್ರತೆ ಮತ್ತು ಧೈರ್ಯ ತುಂಬುವಲ್ಲಿ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ. ಕೊರೊನಾ ಸಂದರ್ಭದಲ್ಲಿ ತಮ್ಮ ಊರಿಗೆ ತೆರಳುತ್ತಿದ್ದ ಸಾವಿರಾರು ಕಾರ್ಮಿಕರು ಪ್ರಾಣ ಕಳೆದುಕೊಂಡರು. ಕೈಗಾರಿಕೆಗಳು ಬಂದ್ ಆಗಿದೆ. ನಿರುದ್ಯೋಗ, ಆಹಾರದ ಕೊರತೆ, ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಆದರೆ ಕೇಂದ್ರ ಸರ್ಕಾರವು ಈ ಬಗ್ಗೆ ಯಾವುದೇ ಚಿಂತೆಯಲ್ಲದಂತೆ ವರ್ತಿಸುತ್ತಿದೆ ಎಂದರು. ಸಾರ್ವಜನಿಕ ಆರೋಗ್ಯಕ್ಕೆ ಕೇಂದ್ರೀಯ ವೆಚ್ಚವನ್ನು ಕನಿಷ್ಠ ಜಿಡಿಪಿಯ ಶೇ. ೩ರಷ್ಟು ಹೆಚ್ಚಿಸಬೇಕು. ಅಗತ್ಯ ವಸ್ತುಗಳ ಕಾಯ್ದೆಯನ್ನು ತೆಗೆದು ಹಾಕುವ ಮತ್ತು ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡುವ ಎಲ್ಲಾ ಸುಗ್ರೀವಾಜ್ಞೆಯನ್ನು ರದ್ದುಗೊಳಿಸಬೇಕು. ಈಗಿರುವ ಕಾರ್ಮಿಕ ಕಾನೂನುಗಳನ್ನು ರದ್ದು ಯಾ ತಿದ್ದುಪಡಿಗೊಳಿಸಿ ಅಮಾನತು ಮಾಡುವ ಎಲ್ಲಾ ಪ್ರಸ್ತಾಪಗಳನ್ನು ಹಿಂದೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನಾ ಸಭೆಯಲ್ಲಿ ಸಿಐಟಿಯು ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್, ಅಕ್ಷರ ದಾಸೋಹ ಸಂಘಟನೆಯ ತಾಲೂಕು ಅಧ್ಯಕ್ಷೆ ಜಯಂತಿ ಶೆಟ್ಟಿ, ಡಿವೈಎಫ್‌ಐ ಜಿಲ್ಲಾ ಸಮಿತಿ ಸದಸ್ಯ ಮಹಮ್ಮದ್ ಇಕ್ಬಾಲ್, ಶೌಕತ್ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.