ವೀರಮಂಗಲ: ಕರುಳಿನ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಮೃತ್ಯು

Puttur_Advt_NewsUnder_1
Puttur_Advt_NewsUnder_1
  • ಮೃತಪಟ್ಟ ಬಳಿಕ ವ್ಯಕ್ತಿಯ ಕೋವಿಡ್ ವರದಿ ಪಾಸಿಟಿವ್

ಪುತ್ತೂರು: ವೀರಮಂಗಲದ 35 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಕರುಳಿನ ನೋವಿನ ಸಮಸ್ಯೆಯಿಂದ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆಗೆ ಸ್ಪಂಧಿಸದೆ ಆ.23ರಂದು ಮೃತಪಟ್ಟಿದ್ದರು. ಆದರೆ ಅವರ ಕೋವಿಡ್ ವರದಿ ಬಾರದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಮೃತ ದೇಹವನ್ನು ಬಿಟ್ಟು‌ಕೊಟ್ಟಿರಲಿಲ್ಲ. ಆ.25ರಂದು ವ್ಯಕ್ತಿಯ ಕೋವಿಡ್ ವರದಿಯಲ್ಲಿ ಪಾಸಿಟಿವ್ ಬಂದ ಬಳಿಕ ಆಸ್ಪತ್ರೆಯಿಂದ ಮೃತ ದೇಹ‌ಬಿಟ್ಟು‌ಕೊಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮೃತರ ಅಂತ್ಯ ಕ್ರಿಯೆ ಪುತ್ತೂರಿನಲ್ಲಿ:
ಮೃತ ದೇಹವನ್ನು ಪುತ್ತೂರು ಚಿಕ್ಕಪುತ್ತೂರಿನಲ್ಲಿರುವ ಹಿಂದು ರುದ್ರ ಭೂಮಿಯಲ್ಲಿ ಕೋವಿಡ್ ನಿಯಮಾವಳಿಯಂತೆ ಅಂತ್ಯಸಂಸ್ಕಾರ ನಡೆಸಲಾಗುವುದು. ಶಾಸಕರ ವಾರ್ ರೂಮ್ ಸಂಯೋಜಕ ಪಿ.ಜಿ.ಜಗನ್ನಿವಾಸ ರಾವ್ ಅವರ ನೇತೃತ್ವದಲ್ಲಿ ಮೃತರ ಸಂಬಂಧಿಕರು ಅಂತ್ಯಸಂಸ್ಕಾರ ನಡೆಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.