Breaking News

ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನ ಅಧ್ಯಕ್ಷ ಉಳುವಾನ ಗಂಗಾಧರ ಭಟ್ ನಿಧನ

Puttur_Advt_NewsUnder_1
Puttur_Advt_NewsUnder_1

ವಿಟ್ಲ:   ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್  ಅಳಿಕೆ ಹಾಗೂ ಮುದ್ದೇನಹಳ್ಳಿ ಇದರ ಅಧ್ಯಕ್ಷರಾದ ಉಳುವಾನ ಗಂಗಾಧರ ಭಟ್(90 ವ.) ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಆ.27ರಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ  ಬಾಯಾರು ಗ್ರಾಮದ ಉಳುವಾನ ಸುಬ್ಬಣ್ಣ ಭಟ್ – ಶಂಕರಿ ಅಮ್ಮನವರ ಪುತ್ರರಾಗಿರುವ ಗಂಗಾಧರ ಭಟ್ ರವರು ಕಳೆದ ಎಪ್ಪತ್ತು ವರುಷಗಳಿಂದ ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ಟ್ರಸ್ಟ್ ಇದರ ಅಧ್ಯಕ್ಷರಾಗಿದ್ದರು ಮಾತ್ರವಲ್ಲದೆ ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ, ಕೃಷಿ ವಿಭಾಗದ ಮುಖ್ಯಸ್ಥರಾಗಿ ಹೀಗೆ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಮಧ್ಯಾಹ್ನ ಮೂರು ಗಂಟೆಗೆ ಮೃತದೇಹವನ್ನು ಅಳಿಕೆಗೆ ತಂದು ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.