ಕಾವು: ಬಿಜೆಪಿ ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ

Puttur_Advt_NewsUnder_1
Puttur_Advt_NewsUnder_1

 

  • ಜನಪರ ಕಾರ್ಯಕ್ರಮಗಳ ಅನುಷ್ಠಾನದೊಂದಿಗೆ ಭಾರತ ವಿಶ್ವಗುರುವಾಗುತ್ತಿದೆ: ಕೋಟ

ಪುತ್ತೂರು: ಪ್ರಧಾನ ಮಂತ್ರ ನರೇಂದ್ರ ಮೋದಿಯವರು ಚುನಾವಣಾ ಸಂದರ್ಭದಲ್ಲಿ ತಿಳಿಸಿದಂತೆ ಎಲ್ಲಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದಾರೆ. ಮುಖ್ಯವಾಗಿ ಕಾಶ್ಮೀರದ ೩೭೦ ಆರ್ಟಿಕಲ್ ರದ್ದತಿ, ಪೌರತ್ವ ಕಾಯ್ದೆ, ರಾಮ ಮಂದಿರದ ನಿರ್ಮಾನ ಮುಂತಾದ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಮೂಲಕ ಭಾರತವನ್ನು ವಿಶ್ವಗುರು ಸ್ಥಾನದಲ್ಲಿ ನಿಲ್ಲಿಸುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದರು.

ಅವರು ಆ.೨೬ ರಂದು ಕಾವು ನನ್ಯ ಜನಮಂಗಲ ಸಭಾ ಭವನದಲ್ಲಿ ನಡೆದ ಬಿಜೆಪಿ ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಭಾರತ ವಿಶ್ವಗುರು ಸ್ಥಾನದಲ್ಲಿ ನಿಲ್ಲುವಂತೆ ಮಾಡಲು ನಾವೆಲ್ಲರೂ ಮೋದಿಯವರೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತನಾಡಿ, ಅತೀ ಹೆಚ್ಚು ಸದಸ್ಯ ಬಲವನ್ನು ಹೊಂದಿರುವ ಬಿಜೆಪಿ ಅಪಾರ ಕಾರ್ಯಕರ್ತರ ಶ್ರಮದಿಂದ ಕೇಂದ್ರದಲ್ಲಿ ಆಡಳಿತ ನಡೆಸುವಂತಾಗಿದೆ. ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಕಾರ್ಯಕರ್ತರು ಪಕ್ಷ ಸಂಘಟನೆಯ ಮುಖಾಂತರ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಸನ್ಮಾನ
ರಾಜ್ಯಾಧ್ಯಕ್ಷರಾಗಿ ೧ ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ನಳಿನ್ ಕುಮಾರ್ ಕಟೀಲ್‌ರವರಿಗೆ ಮಹಾಶಕ್ತಿ ಕೇಂದ್ರದ ವತಿಯಿಂದ ಹಾರ,ಶಾಲು,ಫಲಪುಷ್ಪ,ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಬಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರು, ವಿಭಾಗ ಪ್ರಕೋಷ್ಠ ಪ್ರಮುಖ್ ಗೋಪಾಲಕೃಷ್ಣ ಹೇರಳೆ, ತಾ.ಬಿಜೆಪಿ ಗ್ರಾಮಾಂತರ ಮಂಡಲ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಮಾಡ್ನೂರು ಶಕ್ತಿಕೇಂದ್ರ ಅಧ್ಯಕ್ಷ ಲೋಕೇಶ್ ಚಾಕೋಟೆ, ಗ್ರಾಮಾಂತರ ಕಾರ್ಯದರ್ಶಿ ಚಿತ್ರಪ್ರಸಾದ್ ರೈ ಅಂಕೋತ್ತಿಮಾರು ಉಪಸ್ಥಿತರಿದ್ದರು. ಶಕ್ತಿ ಕೇಂದ್ರ ಅಧ್ಯಕ್ಷರುಗಳಾದ ಅಮರನಾಥ ಆಳ್ವ, ಸಚಿನ್ ರೈ ಪಾಪೆಮಜಲು, ಸತೀಶ್ ಪಾಂಬಾರು, ಸಂತೋಷ್ ಆಳ್ವ, ಪ್ರಕಾಶ್ ಆಳ್ವ ಕೆಯ್ಯೂರು, ನಾರಾಯಣ ಪೂಜಾರಿ ಕುರಿಕ್ಕಾರ, ಯತೀಂದ್ರ ಕೊಚ್ಚಿ ಅತಿಥಿಗಳನ್ನು ಶಾಲು ಹೂ ಗುಚ್ಚ ನೀಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯ ಕುಮಾರ್ ರೈ ಕೋರಂಗ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ತೀರ್ಥಾನಂದ ದುಗ್ಗಳ ವಂದಿಸಿದರು. ತಿಲಕ್ ರೈ ಕುತ್ಯಾಡಿ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.