ಪದವು ಕೊಪ್ಪಳ ಸಾರ್ವಜನಿಕ ರಸ್ತೆಯನ್ನು ಅತಿಕ್ರಮಿಸಿದ ಖಾಸಗಿ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸೇಸಪ್ಪ ಬೆದ್ರಕ್ಕಾಡು ಆಗ್ರಹ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಪುಣಚ ಗ್ರಾಮ ಪಂಚಾಯತ್ ಸುಪರ್ದಿಯಲ್ಲಿರುವ ಪದವು ಕೊಪ್ಪಳ ಸಾರ್ವಜನಿಕ ರಸ್ತೆಯನ್ನು ಖಾಸಾಗಿ ವ್ಯಕ್ತಿಗಳಿಬ್ಬರು ಅತಿಕ್ರಮಿಸಿ ಸಾರ್ವಜನಿಕರ ಸಂಚಾರವನ್ನು ನಿರ್ಬಂದಿಸಿದ್ದಾರೆ. ಇದರಿಂದ ಈ ಭಾಗದ ಜನರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಯಾವುದೇ ಸಕಾರಣವಿಲ್ಲದೇ ಈ ರೀತಿ ಸಾರ್ವಜನಿಕರ ತೊಂದರೆ, ಅಶಾಂತಿ ಸೃಷ್ಟಿಸುತ್ತಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ, ಬಂಟ್ವಾಳ ತಹಸೀಲ್ದಾರ್‌ರವರಿಗೆ ಮನವಿ ಮಾಡಿರುವುದಾಗಿ ಜಿಲ್ಲಾ ದಲಿತ್ ಸೇವಾ ಸಮಿತಿ ಅಧ್ಯಕ್ಷ ಸೇಸಪ್ಪ ಬಿ.ಕೆ ಬೆದ್ರಕಾಡು ರವರು ತಿಳಿಸಿದರು.

ಅವರು ಮಾ.28ರಂದು ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ವಿವರಣೆ ನೀಡಿದರು. ಈಗಾಗಲೇ ಸ್ಥಳಕ್ಕೆ ಗ್ರಾಮ ಪಂಚಾಯತ್ ಪಿಡಿಒ, ಗ್ರಾಮ ಕರಣಿಕರು ಭೇಟಿ ನೀಡಿ ಪರಿಶೀಲನೆ ನಡೆಸಿ ರಸ್ತೆ ಅತಿಕ್ರಮಣವನ್ನು ತೆರವುಗೊಳಿಸುವಂತೆ ತಿಳಿಸಿದ್ದರೂ ಕ್ಯಾರೇ ಎನ್ನದೇ ಉದ್ಧಟತನದಿಂದ ವರ್ತಿಸಿದ್ದಾರೆ ಎಂದು ಅವರು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ರಸ್ತೆ ಫಲಾನುಭವಿಗಳಾದ ಲೋಲಾಕ್ಷ ಅಗ್ರಾಳ, ಭುವನ್ ರೈ ಅಗ್ರಾಳರವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.