ಸರಕಾರದ ಕೋವಿಡ್ ನಿಯಮಾವಳಿಯಂತೆ ಸರಳ ರೀತಿಯಲ್ಲಿ ಶಿಕ್ಷಕರ ದಿನಾಚರಣೆ | ಪೂರ್ವಭಾವಿ ಸಭೆಯಲ್ಲಿ ತೀರ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಈ ವರ್ಷದ ಶಿಕ್ಷಕರ ದಿನಾಚರಣೆಯನ್ನು ಸರಕಾರದ ಕೋವಿಡ್ ನಿಯಮಾವಳಿಯಂತೆ ಸರಳ ರೀತಿಯಲ್ಲಿ ಆಚರಿಸುವುದಾಗಿ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯು ಆ.31ರಂದು ಶಾಸಕ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಸಭಾಂಗಣದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ರವರು ಶಿಕ್ಷಕರ‌ ದಿನಾಚರಣೆಯ ಕುರಿತ ಸರಕಾರಿ ಸುತ್ತೋಲೆಯನ್ನು ಸಭೆಗೆ ತಿಳಿಸಿದರು. ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮವನ್ನು ಸರಕಾರಿ ಮಾರ್ಗಸೂಚಿಯಂತೆ ನಡೆಸಲಾಗುತ್ತಿದ್ದು ಸಭೆಯಿಂದ ಅಭಿಪ್ರಾಯ ಪಡೆದರು.

ಕೊರೋನಾ ಮಹಾಮಾರಿಯ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಈ ವರ್ಷ ಶಿಕ್ಷಕರ ದಿನಾಚರಣೆ ನಡೆಸುವ ಕುರಿತು ಸರಕಾರದ ಮಾರ್ಗಸೂಚಿಯಂತೆ ನಡೆಸಲಾಗುವುದು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಮಾತ್ರ ಭಾಗವಹಿಸಲು ಅವಕಾಶವಿದೆ. ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸದೇ ಅವರು ಆಯಾ ಶಾಲೆಗಳಲ್ಲಿ ಸರಕಾರಿ‌ ನಿಯಮದಂತೆ ಆಚರಿಸುವುದು. ಪುರಭವನದಲ್ಲಿ‌ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕಡಬ ತಾ.ಪಂ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್ ಗೌಡ ಹಾಗೂ ತಹಶೀಲ್ದಾರ್ ರಮೇಶ್ ಬಾಬು ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕಿನ ಶಿಕ್ಷಕ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಕ‌ ಸುಂದರ ಗೌಡ ಸ್ವಾಗತಿಸಿದರು. ರಾಮಕೃಷ್ಣ ಮಲ್ಲಾರ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.