ಡಾ. ಎಂ.ಕೆ.ಪ್ರಸಾದ್, ಸಂಸದ ನಳಿನ್ ಕುಮಾರ್ ಕಟೀಲ್‌ರವರ ಆರೋಗ್ಯಕ್ಕಾಗಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಕೋವಿಡ್-19 ಸೋಂಕು ತಗಲಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸೋಂಕು ಲಕ್ಷಣದಿಂದ ಶೀಘ್ರ ಗುಣಮುಖರಾಗುವಂತೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾದನಲ್ಲಿ  ಸೆ.1ರಂದು ಬೆಳಿಗ್ಗೆ ಪ್ರಾರ್ಥನೆ ಮಾಡಲಾಯಿತು.

ದೇವಳದ ಪ್ರಧಾನ ಅರ್ಚಕ ವಿ.ಎಸ್ ಭಟ್ ಅವರು ವಿಶೇಷವಾಗಿ ಪ್ರಾರ್ಥನೆ ಮಾಡಿದರು. ಇದೇ ಸಂದರ್ಭದಲ್ಲಿ ಡಾ. ಎಂ.ಕೆ.ಪ್ರಸಾದ್ ಅವರ ಚಿಂತನೆಯಂತೆ ಲೋಕಕಲ್ಯಾಣಕ್ಕಾಗಿಯೂ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕೋಶಾಧಿಕಾರಿ ಶ್ರೀನಿವಾಸ್, ಸಮಿತಿಯ ಪದಾಧಿಕಾರಿಗಳಾದ ನಗರಸಭಾ ಮಾಜಿ ಸದಸ್ಯ ಸುಜೀಂದ್ರ ಪ್ರಭು, ನೀಲಂತ್, ಶೇಖರ್ ಗೌಡ ಬನ್ನೂರು, ನಗರಸಭಾ ಸದಸ್ಯ ಪ್ರೇಮ್ ಕುಮಾರ್, ಹಿಂಜಾವೇ ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಕ್ಯಾಂಪ್ಕೋ ಸಂಸ್ಥೆಯ ರಾಮಚಂದ್ರ ಕಾಮತ್, ಪುರುಷೋತ್ತಮ ಕೋಲ್ಪೆ, ರಾಜೇಶ್ ಆನಡ್ಕ ಮತ್ತಿತರರು ಉಪಸ್ಥಿತರಿದ್ದರು.

ನನ್ನ ಚಿಂತೆ ಬಿಡಿ ಲೋಕಕಲ್ಯಾಣಾರ್ಥಕ್ಕೆ ಪ್ರಾರ್ಥಿಸಿ
ಕಾಕತಾಲಿಯವೋ ಏನೊ ವಿಶೇಷ ಪ್ರಾರ್ಥನೆ ವೇಳೆಯೇ ಡಾ. ಎಂ.ಕೆ.ಪ್ರಸಾದ್ ಅವರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರೆ ಮಾಡಿ ಪುತ್ತೂರಿನ ಯೋಗ ಕ್ಷೇಮ ವಿಚಾರಿಸಿದರು. ಅರುಣ್ ಕುಮಾರ್ ಪುತ್ತಿಲ ಅವರು ನಿಮ್ಮ ಆರೋಗ್ಯಕ್ಕಾಗಿ ಮತ್ತು ಆದಷ್ಟು ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವಂತೆ ದೇವಳದಲ್ಲಿ ಪ್ರಾರ್ಥಿಸುತ್ತೇವೆ ಎಂದಾಗ ನನ್ನ ಬಗ್ಗೆ ಚಿಂತೆ ಬೇಡ. ಲೋಕಕಲ್ಯಾಣಾರ್ಥಕ್ಕೆ ಪ್ರಾರ್ಥನೆ ಮಾಡಿ. ವಿಶ್ವದಿಂದಲೇ ಕೊರೋನಾ ದೂರ ಹೋಗುವಂತೆ ಸಂಕಲ್ಪ ಮಾಡಿ ಎಂದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.