Breaking News

ಮುಂಡೂರು ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದಿಂದ ಪ್ರತಿಭಾನ್ವಿತರಿಗೆ ಸನ್ಮಾನ, ಅಡುಗೆ ಸಿಬ್ಬಂದಿಗಳಿಗೆ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
  • ಕಷ್ಟದಲ್ಲಿರುವವರ ಕಣ್ಣೀರೊರೆಸುವುದೇ ಬಿಜೆಪಿ ಉದ್ದೇಶ-ಮಠಂದೂರು

ಪುತ್ತೂರು: ಮುಂಡೂರು ಗ್ರಾ.ಪಂ ವ್ಯಾಪ್ತಿಯ ಸರ್ವೆ, ಮುಂಡೂರು, ಕೆಮ್ಮಿಂಜೆ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಸ್ಥಳೀಯ ಶಾಲಾ ಅಡುಗೆ ಸಿಬ್ಬಂದಿಗಳಿಗೆ ಕಿಟ್ ವಿತರಣೆ ಆ.೩೧ರಂದು ಸರ್ವೆ ಗ್ರಾಮದ ಕಲ್ಪಣೆ ಸಮುದಾಯ ಭವನದಲ್ಲಿ ನಡೆಯಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಾದ ಪ್ರತೀಕ್ಷಾ ಹಾಗೂ ಕೃತಿಕಾ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ರಿತೇಶ್ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ ಸಾಧಕರನ್ನು ಸನ್ಮಾನಿಸುವುದು ಮತ್ತು ಅಡುಗೆ ಸಿಬ್ಬಂದಿಗಳಿಗೆ ಕಿಟ್ ವಿತರಿಸುವ ಕಾರ್ಯ ಅಭಿನಂದನೀಯ ಎಂದರು. ರಾಜಕೀಯ ಮಾತ್ರ ಬಿಜೆಪಿ ಉದ್ದೇಶವಲ್ಲ, ಸಮಾಜದಲ್ಲಿರುವ ಕಟ್ಟ ಕಡೆಯ ವ್ಯಕ್ತಿಗಳ ಸಂಕಷ್ಟದಲ್ಲಿ ಭಾಗಿಯಾಗಿ ಅವರ ಕಣ್ಣೀರೊರೆಸುವುದೇ ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮುಂಡೂರು ಗ್ರಾ.ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೊಟ್ಯಾಡಿಯವರು ಗ್ರಾಮದ ಈ ಬಾರಿಯ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಪತ್ರಕರ್ತರನ್ನು ಗೌರವಿಸುವ ಕಾರ್ಯವನ್ನು ನಾವು ಹಮ್ಮಿಕೊಂಡಿದ್ದು ಆ ಮೂಲಕ ಅರ್ಹರನ್ನು ಗುರುತಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಹೇಳಿದರು. ಬಿಜೆಪಿ ದೇಶಕ್ಕೆ ಉತ್ತಮ ಕೊಡುಗೆ ನೀಡಿದ್ದು ದೇಶ ಕಟ್ಟುವ ಕೆಲಸವನ್ನು ಮಾಡುತ್ತಿದೆ, ಒಂದು ಸಮಯದಲ್ಲಿ ಪಕ್ಷ ತೀರಾ ಹಿನ್ನಡೆಯಲ್ಲಿದ್ದ ಸರ್ವೆ, ಮುಂಡೂರು ವ್ಯಾಪ್ತಿಯಲ್ಲಿ ಇಂದು ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿದೆ ಎಂದು ಹೇಳಿದರು.

ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರ.ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ನವೀನ್ ಪಡ್ಡಾಯೂರು, ಬಿಜೆಪಿ ಸರ್ವೆ ಶಕ್ತಿ ಕೇಂದ್ರದ ಸಂಚಾಲಕ ಅಶೋಕ್ ರೈ ಸೊರಕೆ, ಬಿಜೆಪಿ ಮುಂಡೂರು ಕೆಮ್ಮಿಂಜೆ ಶಕ್ತಿ ಕೇಂದ್ರದ ಸಂಚಾಲಕ ಉಮೇಶ್ ಗೌಡ ಅಂಬಟ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಮುಂಡೂರು ಗ್ರಾ.ಪಂ ಮಾಜಿ ಸದಸ್ಯರಾದ ಅಶೋಕ್ ಕುಮಾರ್ ಪುತ್ತಿಲ, ಬಾಲಕೃಷ್ಣ ಪೂಜಾರಿ ಕುರೆಮಜಲು, ಪ್ರೇಮಲತಾ ಗುತ್ತಿನಪಾಲು, ಬಿಜೆಪಿ ಪ್ರಮುಖರಾದ ರಾಧಾಕೃಷ್ಣ ರೈ ರೆಂಜಲಾಡಿ, ಸದಾಶಿವ ಶೆಟ್ಟಿ ಪಟ್ಟೆ, ರಮೇಶ್ ಗೌಡ ಪಜಿಮಣ್ಣು, ಪ್ರವೀಣ ನೆಕ್ಕಿತ್ತಡ್ಕ, ಬಿಜೆಪಿ ಎಸ್.ಸಿ ಮೋರ್ಚಾದ ಜನಾರ್ದನ ಸರ್ವೆ ಮತ್ತಿತರರು ಉಪಸ್ಥಿತರಿದ್ದರು. ಎಪಿಎಂಸಿ ಮಾಜಿ ಉಪಾಧ್ಯಕ್ಷ ಕರುಣಾಕರ ಗೌಡ ಎಲಿಯ ಸ್ವಾಗತಿಸಿದರು. ಬಿಜೆಪಿ ಮುಖಂಡ ಸುಂದರ ಬಲ್ಯಾಯ ನೆಕ್ಕಿಲು ಕಾರ್ಯಕ್ರಮ ನಿರೂಪಿಸಿದರು.

ಯೂಸುಫ್ ರೆಂಜಲಾಡಿಗೆ ಸನ್ಮಾನ:
ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಪತ್ರಕರ್ತ ಯುಸುಫ್ ರೆಂಜಲಾಡಿ ಅವರನ್ನು ಸನ್ಮಾನಿಸಲಾಯಿತು. ಶಾಸಕ ಸಂಜೀವ ಮಠಂದೂರುರವರು ಶಾಲು ಹೊದಿಸಿ, ಹಾರ ಹಾಕಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಶಕ್ತಿಕೇಂದ್ರದ ಸಭೆ:
ಸನ್ಮಾನ ಹಾಗೂ ಕಿಟ್ ವಿತರಣೆ ಕಾರ್ಯಕ್ರಮದ ಬಳಿಕ ಮುಂಡೂರು ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ ನಡೆಯಿತು. ಸರ್ವೆ, ಮುಂಡೂರು, ಕೆಮ್ಮಿಂಜೆ ಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಶಾಸಕ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮೊದಲಾದವರು ಪಕ್ಷದ ಕಾರ್ಯಕ್ರಮ ಹಾಗೂ ಪಕ್ಷ ಬಲಪಡಿಸಲು ಮಾಡಬೇಕಾದ ಕಾರ್ಯ ವಿಧಾನಗಳ ಬಗ್ಗೆ ವಿವರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.