ನೆಲ್ಯಾಡಿ ಬೆಥನಿ ಐಟಿಐ ಪ್ರವೇಶಾತಿ ಸೆ.10ರ ತನಕ ಅವಧಿ ವಿಸ್ತರಣೆ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಬೆಥನಿ ಐಟಿಐ ನೆಲ್ಯಾಡಿ ಇಲ್ಲಿನ 2020-21ನೇ ಸಾಲಿನ ಪ್ರವೇಶಾತಿ ಅವಧಿಯನ್ನು ಸೆ.10ರ ತನಕ ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಸಂಚಾಲಕರಾದ ರೆ.ಡಾ.ವರ್ಗೀಸ್ ಕೈಪನಡುಕ್ಕ ಒಐಸಿಯವರು ತಿಳಿಸಿದ್ದಾರೆ.

ಭಾರತ ಸರಕಾರದ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ತಿನಿಂದ (ಎನ್‌ಸಿವಿಟಿ) ಸಂಯೋಜನೆಗೊಂಡಿರುವ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್, ವೆಲ್ಡರ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರೀಷನ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಮತ್ತು ಫಿಟ್ಟರ್ ವೃತ್ತಿಗಳಿಗೆ ಎಸ್‌ಎಸ್‌ಎಲ್‌ಸಿ/ಪಿಯುಸಿ ಉತ್ತೀರ್ಣ ಯಾ ಅನುತ್ತೀರ್ಣ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರವೇಶವು ಮುಕ್ತವಾಗಿದೆ. ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ ಹಾಗೂ ಇತರೆ ಪ್ರವರ್ಗಗಳಿಗೆ ಸರಕಾರದ ಮೀಸಲಾತಿ ನಿಯಮಗಳಂತೆ ಸ್ಥಾನಗಳನ್ನು ಕಾಯ್ದಿರಿಸಲಾಗಿದೆ. ಸರಕಾರದಿಂದ ದೊರೆಯುವ ವಿದ್ಯಾರ್ಥಿ ವೇತನ ಮತ್ತು ಇನ್ನಿತರ ಸೌಲಭ್ಯಗಳಿಗೆ ಅವಕಾಶವಿದೆ. ದಾಖಲಾತಿ ಬಯಸುವ ವಿದ್ಯಾರ್ಥಿಗಳು ದೂರವಾಣಿ 9448824153, 9448725836 ನ್ನು ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.