Breaking News

ಕೃಷ್ಣನಗರದಲ್ಲಿ ರಸ್ತೆ ಬದಿ ಕಸ ಎಸೆದ, ಹಲ್ಲೆ ಆರೋಪ: 3 ಮಂದಿ ವಿರುದ್ಧ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಸಮೀಪ ರಸ್ತೆ ಬದಿ ಕಸ ಎಸೆದಿರುವುದನ್ನು ವಿಚಾರಿಸಿದಾಗ ಅಲ್ಲಿಗೆ ಬಂದ ಮೂವರು ನಗರಸಭೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲದೆ, ಪೌರಕಾರ್ಮಿಕರಿಗೆ ಹಲ್ಲೆ ನಡೆಸಲು ಮುಂದಾದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೂವರು ಆರೊಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಸೆ.5ರಂದು ನಗರಸಭೆಯ ವತಿಯಿಂದ ಕೃಷ್ಣನಗರ ಎಂಬಲ್ಲಿ ನಗರಸಬೆ ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ ಅವರ ಉಪಸ್ಥಿತಿಯಲ್ಲಿ ಸಿಬ್ಬಂದಿಗಳು ಸಿ.ಸಿ ಕ್ಯಾಮರ ಅಳವಡಿಸುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ಮಹಿಳೆಯರು ರಸ್ತೆ ಬದಿ ತ್ಯಾಜ್ಯ ಎಸೆಯುತ್ತಿರುವುದನ್ನು ವಿಚಾರಿಸಿದಾಗ ಅಲ್ಲಿಗೆ ಬಂದ ರಜಾಕ್, ನಿಜಾಮ್ ಮತ್ತು ಇಸ್ಮಾಯಿಲ್ ಅವರು ನಗರಸಭೆ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ನಗರಸಭಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾರೆ ಎಂದು ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿಯವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಆರೋಪಿಗಳ ವಿರುದ್ಧ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.