ಈಶ್ವರಮಂಗಲ: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಈಶ್ವರಮಂಗಲ: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸರಳವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನ ಸಂಚಾಲಕರಾದ ಕೆ. ಅಬುಬಕ್ಕರ್ ಹಾಜಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕ ವೃತ್ತಿಯ ಮಹತ್ವವನ್ನು ವಿವರಿಸಿದರು. ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಮೌನ ಪ್ರಾರ್ಥನೆ ನಡೆಸಿ ಶೋಕಾಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಧುರಾ ಎಜುಕೇಷನಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಹನೀಫ್ ಮಧುರಾ, ಪಿಯುಸಿ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ರಮ್ಲತ್.ಕೆ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀ ಪ್ರಿಯಾ ಸ್ವಾಗತಿಸಿ,  ಪಿಯುಸಿ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ರಮ್ಲತ್.ಕೆ ವಂದಿಸಿದರು. ಶಿಕ್ಷಕೇತರ ವೃಂದದವರಾದ ಹನ್ನತ್,ಇಬ್ರಾಹಿಂ,ಇಸ್ಮಾಯಿಲ್ ಸಹಕರಿಸಿದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.