ಸವಣೂರಿನಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಿಜೆಪಿ ಸುಳ್ಯ ಮಂಡಲ, ಮಹಾ ಶಕ್ತಿಕೇಂದ್ರ ಬೆಳಂದೂರು, ಶಕ್ತಿ ಕೇಂದ್ರ ಸವಣೂರು, ಹಿಂದೂ ಜಾಗರಣ ವೇದಿಕೆ ಸವಣೂರು ಇವರ ಆಶ್ರಯದಲ್ಲಿ ಸವಣೂರು ಯುವಕ ಮಂಡಲ ಇವರ ಸಹಕಾರದೊಂದಿಗೆ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಕಾರ್ಡ್ ಅಭಿಯಾನ ಸೆ. 6ರಂದು ಸವಣೂರು ಯುವ ಸಭಾ ಭವನದಲ್ಲಿ ಆರಂಭಗೊಂಡಿದ್ದು, ಸೆ. 7ರ ತನಕ ನಡೆಯಲಿದೆ.


ಪುತ್ತೂರು ನಗರ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್‌ಚಂದ್ರ ರೈ ಮುಗೇರುಗುತ್ತುರವರು ಉದ್ಘಾಟಸಿದರು. ಸುಳ್ಯ ಬಿಜೆಪಿ ಮಂಡಲ ಸಮಿತಿಯ ಪ್ರಧಾನ ಕಾರ್‍ಯದರ್ಶಿ ರಾಕೇಶ್ ರೈ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಬಿಜೆಪಿ ಮಂಡಲ ಸಮಿತಿಯ ಕಾರ್‍ಯದರ್ಶಿ ಇಂದಿರಾ ಬಿ.ಕೆ, ಬಿಜೆಪಿ ಬೆಳಂದೂರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಹಿಂದೂ ಜಾಗರಣ ವೇದಿಕೆ ಸವಣೂರು ಅಧ್ಯಕ್ಷ ಶ್ರೀಧರ್ ಇಡ್ಯಾಡಿ, ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ಮಹೇಶ್ ಕೆ.ಸವಣೂರು, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಪ್ರೀತ್ ರೈ ಖಂಡಿಗ, ಸವಣೂರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಜ್ವಲ್ ಕೆ.ಆರ್.ಕೋಡಿಬೈಲು, ಸವಣೂರು ಸಿ.ಎ.ಬ್ಯಾಂಕ್ ನಿರ್ದೇಶಕ ಚೇತನ್ ಕುಮಾರ್ ಕೋಡಿಬೈಲು, ರಾಜ್ಯ ಯುವ ಜನ ಸಂಘಗಳ ಒಕ್ಕೂಟದ ಪ್ರಧಾನ ಕಾರ್‍ಯದರ್ಶಿ ಸುರೇಶ್ ರೈ ಸೂಡಿಮುಳ್ಳುರವರುಗಳು ಉಪಸ್ಥಿತರಿದ್ದರು. ಸವಣೂರು ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ತಾರಾನಾಥ ಕಾಯರ್ಗ ಸ್ವಾಗತಿಸಿ, ಸವಣೂರು ಯುವಕ ಮಂಡಲದ ನಿಯೋಜಿತ ಅಧ್ಯಕ್ಷ ರಕ್ಷಿತ್ ಕುದ್ಮಾರು ವಂದಿಸಿದರು. ಕಾರ್‍ಯದರ್ಶೀ ಪ್ರವೀಣ್ ಚೆನ್ನವಾರ ಕಾರ್‍ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.