Breaking News

ಪುತ್ತೂರಿಗೆ ನೂತನ ಎ.ಎಸ್ಪಿ ಲಖನ್ ಸಿಂಗ್ ಯಾದವ್- ಡಿವೈಎಸ್ಪಿ ದಿನಕರ್ ಶೆಟ್ಟಿಯವರಿಗೆ ವರ್ಗಾವಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಉಪವಿಭಾಗಕ್ಕೆ ನೂತನ ಐಪಿಎಸ್ ಅಧಿಕಾರಿ ಎ.ಎಸ್ಪಿ ಲಖನ್ ಸಿಂಗ್ ಯಾದವ್ ಸೆ.6ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಪುತ್ತೂರು ಉಪವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿವೈಎಸ್ಪಿ ದಿನಕರ್ ಶೆಟ್ಟಿಯವರಿಗೆ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಮೈಸೂರಿನಲ್ಲಿ ಪ್ರೊಬೆಷನರಿ ಎ.ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲಖನ್ ಸಿಂಗ್ ಯಾದವ್ ಅವರು ಪುತ್ತೂರು ಉಪವಿಭಾಗದಲ್ಲಿ ಪ್ರಥಮ ನೇಮಕಾತಿಯೊಂದಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ವರ್ಗಾವಣೆಗೊಂಡಿರುವ ಡಿವೈಎಸ್ಪಿ ದಿನಕರ್ ಶೆಟ್ಟಿಯವರು ಸುರತ್ಕಲ್ ನಿವಾಸಿಯಾಗಿದ್ದು ಈ ಹಿಂದೆ ಅವರು ಎಸಿಬಿಯಲ್ಲಿ ಡಿವೈಸ್ಪಿಯಾಗಿ ಪುತ್ತೂರಿಗೆ ವರ್ಗಾವಣೆಗೊಂಡಿದ್ದರು.

ಚುನಾವಣೆ ಸಂದರ್ಭದಲ್ಲಿ ಮಡಿಕೇರಿಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ಪುತ್ತೂರಿನಲ್ಲಿ ಮುರಳಿಧರ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದರು. ಚುನಾವಣೆ ಬಳಿಕ ದಿನಕರ್ ಶೆಟ್ಟಿಯವರು ಮತ್ತೆ ಪುತ್ತೂರು ಡಿವೈಎಸ್ಪಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದೀಗ ಪುತ್ತೂರಿಗೆ ನೂತನ ಎ.ಎಸ್ಪಿ ಆಗಮಿಸಿದ್ದ ಹಿನ್ನೆಲೆಯಲ್ಲಿ ಅವರು ದಿನಕರ್ ಶೆಟ್ಟಿಯವರು ವರ್ಗಾವಣೆಗೊಂಡಿದ್ದಾರೆ. ಎ.ಎಸ್ಪಿ ಲಖನ್ ಸಿಂಗ್ ಯಾದವ್ ಅವರು ಕರ್ತವ್ಯಕ್ಕೆ ಹಾಜರಾದ ಸಂದರ್ಭದಲ್ಲಿ ಡಿವೈಎಸ್ಪಿ ದಿನಕರ್ ಶೆಟ್ಟಿಯವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್, ಎಸ್.ಐ ಜಂಬುರಾಜ್ ಮಹಾಜನ್, ಮಹಿಳಾ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕುಸುಮಾಧರ್, ಸಂಚಾರ ಪೊಲೀಸ್ ಠಾಣೆ ಎಸ್.ಐ ರಾಮ ನಾಯ್ಕ ಅವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.