Breaking News

ಆತ್ಮ ನಿರ್ಭರ್ ಭಾರತ್ ಸ್ವ ಉದ್ಯೋಗ ಮಾಹಿತಿ ಶಿಬಿರ ಹಾಗೂ ಸಾಲ ಸೌಲಭ್ಯಗಳ ಮಾಹಿತಿ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ವತಿಯಿಂದ ಭಾರತ ಸರ್ಕಾರದ ಆತ್ಮ ನಿರ್ಭರ್ ಭಾರತ್ ಸ್ವ ಉದ್ಯೋಗ ಮಾಹಿತಿ ಶಿಬಿರ ಹಾಗೂ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಾಗಾರವು ಇಡ್ಕಿದು ಸೇವಾ ಸಹಕಾರಿ ಸಂಘದ ಅಡ್ಯಾಲು ಕರೆ ಶಾಖೆಯ ಪಂಚಾಮೃತ ಸಭಾಭವನದಲ್ಲಿ ಸೆ.6ರಂದು ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರು ವಿದಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರುರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ಬಿ.ಜೆ.ಪಿ ಗ್ರಾಮಾಂತರ ಮಂಡಲದ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾದ ಉಷಾಚಂದ್ರ, ಪ್ರ.ಕಾರ್ಯದರ್ಶಿ ದಯಾನಂದ ಶೆಟ್ಟಿ ಪುಣಚ, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್ ಯಾದವ್, ತಾಲೂಕು ಪಂಚಾಯತ್ ಸದಸ್ಯರಾದ ದಿವ್ಯ ಪುರುಷೋತ್ತಮ, ಬಿ.ಜೆ.ಪಿ ಮಂಡಲದ ಕೋಶಾಧಿಕಾರಿ ರಮೇಶ್ ಭಟ್.ಎಂ.ಎಚ್ ಮೊದಲಾದವರು ಉಪಸ್ಥಿತರಿದ್ದರು. ಸ್ವಉದ್ಯೋಗದ ಕುರಿತಾಗಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ಆಶಾ ಬೆಳ್ಳಾರೆಯವರು ಮಾಹಿತಿ ನೀಡಿದರು. ಪುತ್ತೂರು ಅಮೂಲ್ಯ ಆರ್ಥಿಕ ಸಾಕ್ಷರತೆ ಕೇಂದ್ರದ ಸೀನಿಯರ್ ಕೌನ್ಸಿಲರ್, ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಗೋಪಾಲಕೃಷ್ಣ ಭಟ್‌ರವರು ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಯಶಸ್ವಿನಿ ಶಾಸ್ತ್ರೀ ಸ್ವಾಗತಿಸಿ, ವಿಶಂತಿ ಶೆಟ್ಟಿ ಉರಿಮಜಲು ಪ್ರಾರ್ಥಿಸಿದರು. ತಾಲೂಕು ಪಂಚಾಯತ್ ಸದಸ್ಯರಾದ ವನಜಾಕ್ಷಿ ಎಸ್.ಭಟ್ ವಂದಿಸಿದರು. ಇಡ್ಕಿದು ಶಕ್ತಿ ಕೇಂದ್ರದ ಸಂಚಾಲಕರಾದ ಯಂ ಸುಧೀರ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.