ಕಡಬದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವಕ ಕಾಂಗ್ರೆಸ್ ಪಕ್ಷದ ಜಂಟಿ ಸಭೆ

Puttur_Advt_NewsUnder_1
Puttur_Advt_NewsUnder_1

ಕಡಬ: ಕಡಬ ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯು ಸೆ.8ರಂದು ಕಡಬ ಒಕ್ಕಲಿಗ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷ ಮಿಥುನ್ ರೈ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ ಗೌಡ ಕೈಕುರೆ ಪ್ರಾಸ್ತಾವಿಕವಾಗಿ ಮಾತಾಡಿದರು. ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿಪಿ‌ ವರ್ಗೀಸ್ ,ಸರ್ವೋತ್ತಮ ಗೌಡ ಸೇರಿದಂತೆ ಹಲವು ಗಣ್ಯರು ಹಾಗೂ ಕಾರ್ಯಕಾರ್ತರು ಬಾಗವಹಿಸಿದ್ದರು.

ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷ ಮಿಥುನ್‌ ರೈ ಮಾತನಾಡಿ ದೇಶವನ್ನು ಅದೋಗತಿಗೆ ತಲ್ಲುತ್ತಿರುವ ಕೇಂದ್ರದ ಹಾಗೂ ರಾಜ್ಯದ ಬಿ ಜೆ ಪಿ ಸರಕಾರ ಇಂದು ನಮ್ಮ ದೇಶದಲ್ಲಿ, ರಾಜ್ಯದಲ್ಲಿ ಶೂನ್ಯ ಅಭಿವೃದ್ಧಿ ಮಾಡುವ ಮೂಲಕ ಇಡೀ ದೇಶದ ಜನತೆಯನ್ನು ಸಂಕಷ್ಟದಲ್ಲಿ ಸಿಲುಕಿಸಿ ನಿರ್ಗತಿಕರನ್ನಾಗಿ ಮಾಡಿದೆ ಎಂದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.