Breaking News

ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಹೈ ಕೋರ್ಟ್ ವಕೀಲ ಅರುಣ್ ಶ್ಯಾಮ್

Puttur_Advt_NewsUnder_1
Puttur_Advt_NewsUnder_1
  • ಅರುಣ್ ಶ್ಯಾಮ್ ಮೂಲತಃ ಪುತ್ತೂರಿನವರು
  • ಬೆಂಗಳೂರು ಪೀಠದ ಹೆಚ್ಚುವರಿ ಅಡ್ವೊಕೇಟ್ ಜನರಲ್ -1 ಸ್ಥಾನಕ್ಕೆ ನೇಮಕ

ಬೆಂಗಳೂರು: ಮೂಲತಃ ಪುತ್ತೂರಿನವರಾದ ಹೈಕೋರ್ಟ್ ವಕೀಲ ಅರುಣ್ ಶ್ಯಾಮ್ ಅವರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ರಾಜ್ಯ ಸರಕಾರ ನೇಮಕ ಮಾಡಿದೆ.

ಒಟ್ಟು ಮೂವರನ್ನು ಈ ಹುದ್ದಗೆ ನೇಮಕ ಮಾಡಿದ್ದು, ಬೆಂಗಳೂರು ಪೀಠದ ಹೆಚ್ಚುವರಿ ಅಡ್ವೊಕೇಟ್ ಜನರಲ್ -೧ ಸ್ಥಾನಕ್ಕೆ ಅರುಣ್ ಶ್ಯಾಮ್ ಅವರು ನೇಮಕಗೊಂಡಿದ್ದಾರೆ. ಕಾನೂನು ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆದಿ ನಾರಾಯಣ ಅವರು ಸೆ. ೮ರಂದು ಈ ಆದೇಶ ಹೊರಡಿಸಿದ್ದಾರೆ. ವೈ.ಎಚ್ ವಿಜಯಕುಮಾರ್ ಮತ್ತು ಶ್ರೀ ದ್ಯಾನ್ ಚಿನ್ನಪ್ಪ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಆಯ್ಕೆಯಾದ ಇತರ ಇಬ್ಬರು ನ್ಯಾಯವಾದಿಗಳು.

ಮೂಲತ: ಕೊಳ್ನಾಡು ಗ್ರಾಮದ ಪಂಜಿಗದ್ದೆ ನಿವಾಸಿ ಆಗಿರುವ ಅರುಣ್ ಶ್ಯಾಮ್ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ೨೦೦೬ರಲ್ಲಿ ಪುತ್ತೂರಿನ ಈಶ್ವರಮಂಗಲ ನಿವಾಸಿ ಕೆ.ಎಂ. ನಟರಾಜ್ ಅವರ ಜೊತೆ ಬೆಂಗಳೂರು ಹೈಕೋರ್ಟ್‌ನಲ್ಲಿ ವಕೀಲ ವೃತ್ತಿ ಆರಂಭಿಸಿದ ಅರುಣ್ ಶ್ಯಾಮ್ ಅವರು, ಮುಂದೆ ಸ್ವಂತ ಕಚೇರಿ ಆರಂಭಿಸಿ ವಕೀಲಿ ವೃತ್ತಿ ಮುಂದುವರಿಸಿದ್ದರು. ವಿಟ್ಲ ಮಾದಕಟ್ಟೆ ಹಿ.ಪ್ರಾ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ, ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ, ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡರು. ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಬಳಿಕ ಶಿವಮೊಗ್ಗದ ನ್ಯಾಷನಲ್ ಲಾ ಕಾಲೇಜಿನಲ್ಲಿ ಎಲ್‌ಎಲ್‌ಎಂ ಪದವಿ ಪಡೆದರು. ಇದರ ಜೊತೆಗೆ ಶಿವಮೊಗ್ಗದಲ್ಲಿ ಎಂ.ಆರ್. ಸತ್ಯನಾರಾಯಣ ಅವರ ಜೊತೆ ವಕೀಲಿ ವೃತ್ತಿ ಮಾಡುತ್ತಿದ್ದರು. ಬಳಿಕ ೨೦೦೬ರಲ್ಲಿ ಬೆಂಗಳೂರಿನತ್ತ ಚಿತ್ತ ಹರಿಸಿದರು. ಪ್ರಸ್ತುತ ಬೆಂಗಳೂರಿನ ಅಲಯನ್ಸ್ ಯುನಿವರ್ಸಿಟಿಯಲ್ಲಿ ಪಿಎಚ್‌ಡಿ ಅಧ್ಯಯನ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಅರುಣ್‌ಶ್ಯಾಮ್ ಅವರು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ನೇಮಕಗೊಂಡಿದ್ದರು.

ಅರುಣ್ ಶ್ಯಾಮ್ ಅವರ ತಂದೆ ಎಂ. ಈಶ್ವರ ಭಟ್, ತಾಯಿ ಕುಸುಮ ಈಶ್ವರ ಭಟ್. ಪತ್ನಿ ಸುಷ್ಮಾ ಅರುಣ್ ಶ್ಯಾಮ್. ಮಕ್ಕಳು ಆದ್ಯಶ್ರೀ ಹಾಗೂ ಅಮೃತಶ್ರೀ.

ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡ ಬಳಿಕ `ಸುದ್ದಿ’ಯೊಂದಿಗೆ ಮಾತನಾಡಿದ ಅರುಣ್ ಶ್ಯಾಂ ಅವರು ನೇಮಕದ ಕುರಿತು ಸಂತಸ ಹಂಚಿಕೊಂಡಿದ್ದಾರೆ.

ಜಿಲ್ಲೆಗೆ 2ನೇ ಅವಕಾಶ
ಅರುಣ್ ಶ್ಯಾಂ ಅವರು ಅಡಿಷನಲ್ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಳ್ಳುವ ಮೂಲಕ ದ.ಕ. ಜಿಲ್ಲೆಗೆ ಇದು ಎರಡನೇ ಬಾರಿ ದೊರೆತ ಅವಕಾಶ. ಈ ಹಿಂದೆ, ಪ್ರಸ್ತುತ ಅಡಿಷನಲ್ ಸಾಲಿಸಿಟರ್ ಜನರಲ್ ಆಗಿರುವ ಈಶ್ವರಮಂಗಲ ಕೊನೆ ತೋಟದ ಕೆ.ಎಂ. ನಟರಾಜ್ ಅವರು ಅಡಿಷನಲ್ ಅಡ್ವೊಕೇಟ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.